ಗೋಣಿಕೊಪ್ಪಲು, ಡಿ. ೨೩: ಜಿಲ್ಲಾ ಆರೋಗ್ಯ ಮತ್ತು ಕುಟುಂಬ

ಕಲ್ಯಾಣ ಇಲಾಖೆ ವತಿಯಿಂದ ಗೋಣಿಕೊಪ್ಪಲುವಿನ ಕಾವೇರಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಇಲಾಖೆ ಸಿಬ್ಬಂದಿಗಳ ಕ್ರೀಡಾ ಉತ್ಸವಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಚಾಲನೆ ನೀಡಿದರು. ಎರಡು ದಿನಗಳ ಕಾಲ ನಡೆಯುವ ಈ ಕ್ರೀಡಾ ಕೂಟದಲ್ಲಿ ಜಿಲ್ಲೆಯ ೫ ತಾಲೂಕುಗಳಿಂದ ವೈದ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸುತ್ತಿದ್ದಾರೆ. ಮಹಿಳೆಯರಿಗಾಗಿ ಅಥ್ಲೇಟಿಕ್ ಸೇರಿದಂತೆ ವಿವಿಧ ಕ್ರೀಡೆಗಳು, ಪುರುಷರಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ.

ಸದಾ ಒತ್ತಡದಲ್ಲಿರುವ ಆರೋಗ್ಯ ಇಲಾಖೆಯ

(ಮೊದಲ ಪುಟದಿಂದ) ವೈದ್ಯರು ಹಾಗೂ ಸಿಬ್ಬಂದಿಗಳು ಕಳೆದ ಮೂರು ವರ್ಷಗಳಿಂದ ಯಾವುದೇ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಈ ಭಾರಿ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ವೆಂಕಟೇಶ್ ತಿಳಿಸಿದರು. ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಿAದ ವೈದ್ಯರು ಹಾಗೂ ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ವೀರಾಜಪೇಟೆ ತಾಲೂಕಿನ ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಮಾತನಾಡಿ ಕಳೆದ ಮೂರು ವರ್ಷಗಳ ಹಿಂದೆ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕು ಕೇಂದ್ರಗಳಲ್ಲಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸ ಲಾಗಿತ್ತು. ಈ ಬಾರಿ ವೀರಾಜಪೇಟೆ ತಾಲೂಕಿನಲ್ಲಿ ಆಯೋಜಿಸಲಾಗಿದೆ. ಪುರುಷ ಹಾಗೂ ಮಹಿಳೆಯರು ವಿವಿಧ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.

ಸಿಬ್ಬಂದಿಗಳು ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗದAತೆ ಮುನ್ನಚ್ಚರಿಕೆ ಕ್ರಮವಾಗಿ ಹಲವು ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿರುವುದಾಗಿ ತಿಳಿಸಿದರು. ಕ್ರೀಡಾಕೂಟ ಉದ್ಘಾಟನೆ ಸಂದರ್ಭ ಅಧಿಕಾರಿಗಳಾದ ಡಾ.ಗೋಪಿನಾಥ್, ಡಾ.ಆನಂದ್, ಡಾ.ಶ್ರೀನಿವಾಸ್, ಡಾ.ಚೇತನ್ ಸೇರಿದಂತೆ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು.