ಸೋಮವಾರಪೇಟೆ, ಡಿ. 22: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ತಾ. 25ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಚುನಾವಣೆ ಸಂಬಂಧ ಮುಖಂಡರುಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿಲ್ಲಾ ಒಬಿಸಿ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಜಿ. ಇಂದ್ರೇಶ್ ತಿಳಿಸಿದ್ದಾರೆ.
ಮಧು ಬಂಗಾರಪ್ಪ ಅವರು ತಾ. 25ರಂದು 10.30ಕ್ಕೆ ಮಡಿಕೇರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಮಾಜೀ ಸಚಿವ ಬಿ.ಎ. ಜೀವಿಜಯ, ಕೆಪಿಸಿಸಿ ವಕ್ತಾರ ಚಂದ್ರಮೌಳಿ, ರಾಜ್ಯ ಕಾನೂನು ಘಟಕ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಮಾಜೀ ಎಂಎಲ್ಸಿ ವೀಣಾ ಅಚ್ಚಯ್ಯ, ಮುಖಂಡರಾದ ಡಾ. ಮಂಥರ್ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಸೇರಿದಂತೆ ಇತರ ಮುಖಂಡರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಇಂದ್ರೇಶ್ ಮಾಹಿತಿ ನೀಡಿದ್ದಾರೆ.