ನಾಪೋಕ್ಲು, ಡಿ. ೨೩: ‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಆಗಲು ಉಪ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಿ ಕೊಡಿ. ನಾಪೋಕ್ಲು ಚೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ವಾಹನ ಕೊರತೆ ಇದೆ. ಸಿಬ್ಬಂದಿಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಿ. ಗ್ರಾಹಕರ ವಿದ್ಯುತ್ ಬಿಲ್ಲುಗಳಲ್ಲಿರುವ ಸಮಸ್ಯೆ ಗಳನ್ನು ಪರಿಹರಿಸಲು ಮೂರ್ನಾಡಿಗೆ ತೆರಳಬೇಕಾಗಿದೆ. ಇದನ್ನು ತಪ್ಪಿಸಿ, ನಾಪೋಕ್ಲುವಿನಲ್ಲಿ ಅವಕಾಶ ಕಲ್ಪಿಸಿ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವೋಲ್ಟೇಜ್ ಕೊರತೆ ಇದೆ. ಸರಿ ಪಡಿಸಲು ಕ್ರಮ ಕೈಗೊಳ್ಳಿ’ ಎಂಬುದಾಗಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿದ್ಯುತ್ ಅದಾಲತ್ನಲ್ಲಿ ಸಾರ್ವಜನಿಕರು ಒತ್ತಾಯಿಸಿದರು.
ಅದಾಲತ್ನಲ್ಲಿ ಪಾಲ್ಗೊಂಡಿದ್ದ ಮೈಸೂರು ವಿಭಾಗದ ಮುಖ್ಯ ಅಭಿಯಂತರ ಉಮೇಶ್ ಚಂದ್ರ ಮಾತನಾಡಿ, ನಾಪೋಕ್ಲುವಿನಲ್ಲಿ ವಿದ್ಯುತ್ ವಿತರಣಾ ಕೇಂದ್ರವನ್ನು ಸ್ಥಾಪಿಸಲು ಜಾಗದ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದರು. ಕಾಫಿ ಬೆಳೆಗಾರರಿಗೆ ೧೦ ಹೆಚ್ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲು ಅಗತ್ಯ ದಾಖಲೆಗಳನ್ನು ನೀಡಬೇಕಾಗಿದೆ. ಅಮೃತ ಯೋಜನೆ ಅಡಿ ಎಸ್.ಸಿ. - ಎಸ್.ಟಿ. ಸಮುದಾಯದವರಿಗೆ ೭೫ ಯೂನಿಟ್ಗಳಷ್ಟು ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು. ಗ್ರಾಹಕರ ವಿದ್ಯುತ್ ಬಿಲ್ ಸಮಸ್ಯೆ ಪರಿಹರಿಸಲು ವಾರಕ್ಕೆ ಒಂದು ದಿನ ನಾಪೋಕ್ಲುವಿನಲ್ಲಿ ವ್ಯವಸ್ಥೆ ಕೈಗೊಳ್ಳಲು ಕ್ರಮ ಕೈಗೊಳ್ಳ ಲಾಗುವುದು ಎಂದರು. ಹಂತ ಹಂತ ವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿ ಸುವ ನಿಟ್ಟಿನಲ್ಲಿ ತಿಂಗಳಿಗೆ ಒಂದು ಸಾರಿ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳ ಲಾಗುವುದೆಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಾಚೇಟ್ಟಿರ ಕುಶು ಕುಶಾಲಪ್ಪ, ಮಹಮ್ಮದ್ ಕುರೇಶಿ, ಪ್ರಮುಖರಾದ ಎಂ.ಎ. ಮನ್ಸೂರ್ ಆಲಿ, ಶಿವಾಚಾಳಿ ಯಂಡ ಜಗದೀಶ್, ಕುಲ್ಲೇಟ್ಟಿರ ಅಜಿತ್ ನಾಣಯ್ಯ, ಅಮ್ಮಂಡ ಮನು ಮಹೇಶ್, ಕಂಗAಡ ಜಾಲಿ ಪೂವಪ್ಪ, ಆಬಿದ್ ಸೇರಿದಂತೆ ಇನ್ನಿತರರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.
ಈ ಸಂದರ್ಭ ಚೆಸ್ಕಾಂ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್. ಪಾರ್ವತಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಉಪಾಧ್ಯಕ್ಷ ಮಹಮ್ಮದ್ ಟಿ.ಎ, ಶಿವಾಚಾಳಿಯಂಡ ಅಂಬಿ ಕಾರ್ಯಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಇನ್ನಿತರರು ಉಪಸ್ಥಿತರಿದ್ದರು.