ಮುಳ್ಳೂರು, ಡಿ. ೨೩: ತೀರ ಹದಗೆಟ್ಟ ರಸ್ತೆಯ ದುರಸ್ತಿ ಕಾರ್ಯ ಕಳಪೆಯಿಂದ ಕೂಡಿದೆ ಎಂದು ಶನಿವಾರಸಂತೆ ನಿವಾಸಿಗಳು ಆರೋಪಿಸಿದ್ದಾರೆ.
ಇಲ್ಲಿಗೆ ಸಮೀಪದ ಶನಿವಾರಸಂತೆ ಕಾವೇರಿ ಪದವಿಪೂರ್ವ ಕಾಲೇಜಿಗೆ ತೆರಳುವ ಜಿ.ಪಂ.ಗೆ ಸೇರಿದ ೨೦೦ ಮೀಟರ್ ರಸ್ತೆ ತೀರ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ಕುರಿತು ವಿದ್ಯಾಸಂಸ್ಥೆ ಮುಖ್ಯಸ್ಥರು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದ ಪರಿಣಾಮ ಅಭಿವೃದ್ಧಿ ಕಾಮಗಾರಿಗೆ ರೂ. ೪.೮೦ ಲಕ್ಷ ಬಿಡುಗಡೆ ಮಾಡಲಾಗಿತ್ತು.
ಈ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಯಿತು. ಆದರೆ, ಡಾಂಬರಿಕರಣ ಮಾಡಿರುವುದು ಕಳಪೆಯಲ್ಲಿ ಕೂಡಿದೆ. ಈ ಬಗ್ಗೆ ತಿಳಿಸಿದರೂ ಸಕರಾತ್ಮಕ ಸ್ಪಂದನ ದೊರೆತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಈ ಸಂಬAಧ ಜಿಲ್ಲಾಡಳಿತಕ್ಕೆ ಈ ಕುರಿತು ದೂರು ನೀಡಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಹೆಚ್.ಎನ್. ದೇವರಾಜ್ ತಿಳಿಸಿದ್ದಾರೆ.