ವೀರಾಜಪೇಟೆ, ಡಿ. 22: ಕೊಡಗು ಜಿಲ್ಲಾ ಕಿವುಡರ ಸಂಘ ಪುನರ್ ರಚನೆಗೊಂಡಿದ್ದು, ನೂತನ ಅಧ್ಯಕ್ಷರಾಗಿ ಹೆಚ್.ಜಿ. ದಿವ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಕೆ. ಶಂಕರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್, ಜಂಟಿ ಕಾರ್ಯದರ್ಶಿಯಾಗಿ ರಮ್ಷದ್, ಖಜಾಂಚಿಯಾಗಿ ಸುರೇಶ್, ನಿರ್ದೇಶಕರಾಗಿ ವೆಂಕಟೇಶ್, ಗಣೇಶ್, ಅಸ್ಲಾಂ, ಛಾಯಾ, ಸುನಿಲ್, ಪ್ರಭಾಕರ್ ಅವಿರೋಧವಾಗಿ ನೇಮಕಗೊಂಡಿದ್ದಾರೆ.

ವೀರಾಜಪೇಟೆಯ ಪುರಸಭೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಯ ರಚನೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜೋಸೆಫ್ ಶಾಮ್ ವಹಿಸಿದ್ದರು. ಉಪಾಧ್ಯಕ್ಷರಾದ ಗೌರವ್ ಸೋಮಣ್ಣ ಹಾಜರಿದ್ದರು.

ಸಭೆಯಲ್ಲಿ ನೂತನ ಅಧ್ಯಕ್ಷೆ ಹೆಚ್.ಜಿ. ದಿವ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘದಲ್ಲಿ ನಿರಂತರವಾಗಿ ಚಟುವಟಿಕೆಗಳು ನಡೆಸುವ ಮೂಲಕ ಸರ್ಕಾರದ ಸೌಲಭ್ಯಕ್ಕಾಗಿ ಸಂಬಂಧಿಸಿದವರನ್ನು ಭೇಟಿಯಾಗಿ, ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಸಂಘ ಹಮ್ಮಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು.