ಮಡಿಕೇರಿ, ಡಿ. ೨೩: ಮೂಲತಃ ಜಿಲ್ಲೆಯವರಾದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ್ ಪೂಣಚ್ಚ ತಂಬAಡ ಬರೆದ ‘ಇತಿಹಾಸ ದರ್ಪಣ’ ಕೃತಿ ಬಿಡುಗಡೆ ತಾ. ೨೫ರಂದು ಬೆಂಗಳೂರು ಅರಮನೆ ರಸ್ತೆಯ ಭಾರತ್ ಸ್ಕೌಟ್ಸ್, ಗೈಡ್ಸ್ ಆವರಣದಲ್ಲಿ ನಡೆಯಲಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ, ಹಾಲಿ ಲೋಕಸಭಾ ಸದಸ್ಯ ಡಿ.ವಿ. ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಹಂಪಿ ವಿವಿಯ ಕುಲಪತಿ ಸ.ಚಿ. ರಮೇಶ್ ಅಧ್ಯಕ್ಷತೆ ವಹಿಸಲಿದ್ದು, ಕಲಬುರಗಿ ಕರ್ನಾಟಕ ಕೇಂದ್ರೀಯ ವಿದ್ಯಾಲಯದ ವಿಶ್ರಾಂತ ಸಮ ಕುಲಪತಿ, ಡಾ. ಎಸ್. ಚಂದ್ರಶೇಖರ್, ಹಂಪಿ ವಿ.ವಿ.ಯ ವಿಶ್ರಾಂತ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ನ ಕುಲಪತಿ ಎಂ.ಕೆ. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.