ಪೊನ್ನಂಪೇಟೆ, ಡಿ. ೨೩: ಪೊನ್ನಂಪೇಟೆ ತಾಲೂಕಿನ ಬೆಕ್ಕೆಸೊಡ್ಲೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗೋಣಿ ಕೊಪ್ಪಲು ಕಾವೇರಿ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸ ಲಾಗಿರುವ ವಿಶೇಷ ವಾರ್ಷಿಕ ಶಿಬಿರವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಉದ್ಘಾಟಿಸಿದರು. ನಂತರ ಶಿಬಿರಾರ್ಥಿ ಗಳನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿಯಾಗಿವೆ. ಶಿಬಿರ ವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು. ಬೆಕ್ಕೆಸೊಡ್ಲೂರು ಶ್ರೀ ಮಂದತವ್ವ ದೇವ ಭಂಡಾರ ಸಮಿತಿ ಅಧ್ಯಕ್ಷ ಮಾಚಿಮಾಡ ರವೀಂದ್ರ ಮಾತನಾಡಿ, ಶಿಬಿರದಲ್ಲಿ ಕಲಿತ ಶಿಸ್ತು, ಸಮಯ ಪಾಲನೆ, ಸ್ವಚ್ಛತಾ ಮನೋಭಾವ, ಉತ್ತಮ ಅಭ್ಯಾಸಗಳನ್ನು ಬದುಕಿಗೆ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು. ಪೊನ್ನಂಪೇಟೆ ಎಪಿಸಿ ಎಂಎಸ್ ಮಾಜಿ ಅಧ್ಯಕ್ಷ ಮಲ್ಲಮಾಡ ಪ್ರಭು ಪೂಣಚ್ಚ ಮಾತನಾಡಿ, ವಿದ್ಯಾರ್ಥಿ ಗಳು ಗುರು ಹಿರಿಯರಿಯರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾನೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಮಾಡ ರಶ್ಮಿ ಪ್ರವೀಣ್, ಬೆಕ್ಕೆಸೊಡ್ಲೂರು ಸ.ಮಾ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಸಿ.ಎನ್. ಡೈನಿ ಮಾತನಾಡಿದರು. ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್.ಎಸ್. ಅಧಿಕಾರಿಗಳಾದ ಎಂ.ಎನ್. ವನಿತ್ ಕುಮಾರ್, ಎನ್.ಪಿ. ರೀತಾ, ಶಿಬಿರಾಧಿಕಾರಿಗಳಾದ ರಾಜೇಶ್ವರಿ, ಸುನಿಲ್ ಕುಮಾರ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು. ಮೋಕ್ಷ ಮತ್ತು ರೀನಾ ಕಾರ್ಯಕ್ರಮ ನಿರೂಪಿಸಿದರು.