ಸಂಪಾಜೆ, ಡಿ. ೨೩: ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ, ಜಿಲ್ಲಾ ಯುವ ಒಕ್ಕೂಟ - ಕೊಡಗು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ ಪಠ್ಯೇತರ ಸ್ಪರ್ಧಾ ಕಾರ್ಯಕ್ರಮ ಸಂಪಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆೆಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋಪಾಲ ಪೆರಾಜೆ ಮಾತನಾಡಿ, ವಿದ್ಯಾರ್ಥಿಗಳು ಓದುವುದರೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಸಿಗಬೇಕಾದರೆ, ಪರಿಪೂರ್ಣವಾದ ಉತ್ತಮ ಶಿಕ್ಷಣ ಪಡೆಯಬೇಕು, ಎಲ್ಲಾ ವಿದ್ಯಾರ್ಥಿಗಳು ಈಗಿನಿಂದಲೇ ಕಥೆ ಪುಸ್ತಕ, ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ನೇತಾಜಿ ಗೆಳೆಯರ ಬಳಗದ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು, ಮುಂದೆಯೂ ಇಂತಹ ಕಾರ್ಯಕ್ರಮಗಳು ಪ್ರತಿ ಶಾಲೆಯಲ್ಲೂ ನಡೆಯಲಿ ಎಂದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲ ಭರತ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಶಿಕುಮಾರ್ ಹೆಚ್.ಬಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಪಿ.ಎಲ್., ನೇತಾಜಿ ಗೆಳೆಯರ ಬಳಗದ ಕಾರ್ಯದರ್ಶಿ ಸುಂದರ ಹೆಚ್.ಬಿ. ಭಾಗವಹಿಸಿದ್ದರು.

ನಂತರ ವಿದ್ಯಾರ್ಥಿಗಳಿಗೆ ಜಾನಪದ ಗೀತೆ, ಛದ್ಮವೇಶ, ಚಿತ್ರಕಲೆ, ಭಾಷಣ ಸ್ಪರ್ಧೆಗಳು ನಡೆದವು. ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಂಚಲಿAಗೇಶ್ವರ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಜಯಕುಮಾರ್ ಚೆದ್ಕಾರ್, ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ರಾಣಿ, ನೇತಾಜಿ ಗೆಳೆಯರ ಬಳಗದ ಖಜಾಂಜಿ ನಾರಾಯಣ ಹೆಚ್.ಸಿ ಭಾಗವಹಿಸಿ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.