ಮಡಿಕೇರಿ, ಡಿ. 22: ಅರಣ್ಯದಂಚಿನಲ್ಲಿ ವಾಸಿಸುತ್ತಿರುವವರು ಅರ್ಹರಾಗಿದ್ದರು ಅವರಿಗೆ ಹಕ್ಕುಪತ್ರ ನೀಡುವಲ್ಲಿ ಆಡಳಿತ ವಿಳಂಬ ಮಾಡುತ್ತಿದೆ ಎಂದು ಬೆಳಗಾವಿ ವಿಧಾನಸಭಾ ಕಲಾಪದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಗಮನ ಸೆಳೆದರು.

75 ವರ್ಷ ಅಥವಾ 3 ತಲೆಮಾರು ವಾಸಿಸುತ್ತಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿದರೂ ಕೂಡ ವಿಳಂಬ ಧೋರಣೆಯನ್ನು ಅಧಿಕಾರಿಗಳು ತೋರುತ್ತಿದ್ದಾರೆ.

ಜಿಲ್ಲಾಧಿಕಾರಿಗಳು ಇದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಮಾನವೀಯತೆ ಯಲ್ಲಿಯೂ ಅಧಿಕಾರಿಗಳು ಕೆಲಸ ಮಾಡಬೇಕು. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗಕ್ಕೆ ಅನ್ಯಾಯವಾಗುತ್ತದೆ ಎಂದು ಬೋಪಯ್ಯ ಒತ್ತಿ ಹೇಳಿದರು.