ಐಪಿಎಲ್-ದಾಖಲೆಯ ಮೊತ್ತಕ್ಕೆ ಸ್ಯಾಮ್ ಕರನ್ ಹರಾಜು

ಕೊಚ್ಚಿ, ಡಿ. ೨೩: ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆAಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಇತಿಹಾಸ ಬರೆದಿದ್ದು, ದಾಖಲೆಯ ೧೮.೫೦ ಕೋಟಿ ರೂಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಇಂದು ಕೇರಳದ ಕೊಚ್ಚಿಯಲ್ಲಿ ನಡೆಯುತ್ತಿರುವ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆAಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ೧೮.೫೦ ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‌ನಲ್ಲಿ ಸ್ಯಾಮ್ ಕರನ್ ಖರೀದಿಸಲು ಪಂಜಾಬ್ ಹಾಗೂ ಮುಂಬೈ ನಡುವೆ ಬಾರಿ ಜಿದ್ದಾಜಿದ್ದು ಕಂಡುಬAತು. ಅಂತಿಮವಾಗಿ ಪಂಜಾಬ್ ಕಿಂಗ್ಸ್ ೧೮.೫೦ ಕೋಟಿಗೆ ಖರೀದಿಸಿತು. ಈ ಮೂಲಕ ಕ್ರಿಸ್ ಮೋರಿಸ್ ಅವರ ಈ ಹಿಂದಿನ ದಾಖಲೆಯ ಬಿಡ್ ಪತನಗೊಂಡಿತು.

ಕಂದಕಕ್ಕೆ ಉರುಳಿದ ಸೇನಾ ವಾಹನ-೧೬ ಯೋಧರು ಹುತಾತ್ಮ

ಸಿಕ್ಕಿಂ, ಡಿ. ೨೩: ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ ೧೬ ಯೋಧರು ಹುತಾತ್ಮರಾಗಿದ್ದು, ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಚಟ್ಟೇನ್‌ನಿಂದ ಥಂಗು ಕಡೆಗೆ ತೆರಳುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ಕಡಿದಾದ ಕಂದಕಕ್ಕೆ ಜಾರಿದೆ. ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು ೧೩ ಯೋಧರು ಸೇರಿದ್ದಾರೆ.

ಕೊರೊನಾ ಕುರಿತ ಆರೋಗ್ಯ ಸೇವೆಗಳ ಬಗ್ಗೆ ‘ಮಾಕ್ ಡ್ರಿಲ್’

ಬೆಂಗಳೂರು, ಡಿ. ೨೩: ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂದಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಅನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ತಾ. ೨೭ ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಪ್ರದರ್ಶನ (ಮಾಕ್ ಡ್ರಿಲ್) ನಡೆಸುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವರು ನಡೆಸಿದ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಪ್ರತಿದಿನ ವಿಶ್ವದಲ್ಲಿ ೫ರಿಂದ ಲಕ್ಷ ಕೇಸ್‌ಗಳು ಪತ್ತೆಯಾಗುತ್ತಿವೆ. ಈ ಪೈಕಿ ಚೀನಾ, ಜಪಾನ್, ತೈವಾನ್, ಅಮೆರಿಕಾ, ಯುರೋಪ್, ನ್ಯೂಜಿಲೆಂಡ್ ಸೇರಿದಂತೆ ಶೇ. ೮೦ ರಷ್ಟು ಹೊಸ ಕೇಸ್‌ಗಳು ೧೦ ರಾಷ್ಟçಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದರು. ಕಳೆದ ಮೂರು ತಿಂಗಳಿನಿAದ ಕೊರೊನಾ ವಿಶ್ವದ ನಾನಾ ದೇಶಗಳಲ್ಲಿ ಹೇಗೆ ಏರಿಕೆಯಾಗುತ್ತಿದೆ ಅನ್ನುವ ಬಗ್ಗೆ ಸಭೆಯಲ್ಲಿ ಎಲ್ಲಾ ರಾಜ್ಯಗಳಿಗೂ ಮಾಹಿತಿ ನೀಡಿದರು. ಸದ್ಯ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. ೦.೦೩ ರಷ್ಟು ಇದೆ. ಭಾರತದಲ್ಲಿ ಎರಡು ಡೋಸ್‌ಗಳ ಲಸಿಕಾಕರಣ ಆಗಿರುವುದು ಇದಕ್ಕೆ ದೊಡ್ಡ ಕಾರಣವಾಗಿದೆ. ಜೊತೆಗೆ ನಮ್ಮ ಜನರಲ್ಲಿ ಸ್ವಾಭಾವಿಕವಾದಂತಹ ರೋಗ ನಿರೋಧಕ ಶಕ್ತಿಯೂ ಒಂದು ಕಾರಣವಾಗಿರಬಹುದು. ವಿದೇಶಗಳಿಗೆ ಹೋಲಿಕೆ ಮಾಡಿದಾಗ ಕೊರೊನಾ ನಿಯಂತ್ರಣದ ಬಗ್ಗೆ ನಮ್ಮ ದೇಶದ ಜನ ಹೆಚ್ಚು ಒಲವು ತೋರಿರುವುದು ಕಂಡು ಬಂದಿದೆ ಎಂದರು.

‘ಕೋವಿಡ್ ರೂಪಾಂತರಿ ಭಾರತಕ್ಕೆ ಆತಂಕಕಾರಿಯಲ್ಲ’

ಬೆAಗಳೂರು, ಡಿ. ೨೩: ಕೊರೊನಾ ವೈರಸ್‌ನ ಬಿಎಫ್.೭ ರೂಪಾಂತರಿ ಓಮಿಕ್ರಾನ್ ಉಪ ರೂಪಾಂತರಿಯಾಗಿದ್ದು, ಜನರ ಮೇಲಿನ ಅದರ ತೀವ್ರತೆ ಬಗ್ಗೆ ಭಾರತವು ಹೆಚ್ಚು ಚಿಂತಿಸಬೇಕಾಗಿಲ್ಲ ಎಂದು ದೇಶದ ಖ್ಯಾತ ವಿಜ್ಞಾನಿಗಳು ಹೇಳಿದ್ದಾರೆ. ಫೇಸ್ ಮಾಸ್ಕ್ ಧರಿಸುವುದು ಮತ್ತು ಅನಗತ್ಯ ಜನಸಂದಣಿಯನ್ನು ತಪ್ಪಿಸುವುದು ಯಾವಾಗಲೂ ಸೂಕ್ತ ಎಂದು ಬೆಂಗಳೂರಿನ ಟಾಟಾ ಇನ್‌ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಅಂಡ್ ಸೊಸೈಟಿ (ಟಿಐಜಿಎಸ್) ನಿರ್ದೇಶಕ ರಾಕೇಶ್ ಮಿಶ್ರಾ ಎಚ್ಚರಿಸಿದ್ದಾರೆ. ನೆರೆಯ ದೇಶ ಚೀನಾ ಭಾರತ ಎದುರಿಸಿದ ಸೋಂಕಿನ ವಿವಿಧ ಅಲೆಗಳನ್ನು ಎದುರಿಸದ ಕಾರಣ ಇದೀಗ ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-೧೯ ಪ್ರಕರಣಗಳ ಉಲ್ಬಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದು ಓಮಿಕ್ರಾನ್‌ನ ಉಪ-ರೂಪವಾಗಿದೆ. ಕೆಲವು ಸಣ್ಣ ಬದಲಾವಣೆಗಳನ್ನು ಹೊರತುಪಡಿಸಿ ಮುಖ್ಯ ವೈಶಿಷ್ಟö್ಯಗಳು ಓಮಿಕ್ರಾನ್‌ನಂತೆ ಇರುತ್ತವೆ, ಯಾವುದೇ ದೊಡ್ಡ ವ್ಯತ್ಯಾಸವಿಲ್ಲ ಎಂದು ತಿಳಿಸಿದ್ದಾರೆ.

ಮುಂಗಾರು ಅಧಿವೇಶನ ೬ ದಿನ ಮುಂಚಿತ ಮುಕ್ತಾಯ

ನವದೆಹಲಿ, ಡಿ. ೨೩: ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದೆ. ತಾ. ೭ ರಂದು ಆರಂಭವಾಗಿದ್ದ ಅಧಿವೇಶನ ತಾ. ೨೯ಕ್ಕೆ ಮುಗಿಯಬೇಕಿತ್ತು. ಆದರೆ, ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸರ್ಕಾರದ ಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರತಿನಿಧಿಗಳನ್ನೊಳಗೊಂಡ ಲೋಕಸಭಾ ಕಾರ್ಯ ಕಲಾಪ ಸಮಿತಿ ಸಭೆಯಲ್ಲಿ ಅಧಿವೇಶನದ ಅವಧಿಯನ್ನು ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಸದನ ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನಾ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ ಮುಂಗಾರು ಸಂಸತ್ ಅಧಿವೇಶನ ಶೇ. ೯೭ ರಷ್ಟು ಫಲಪ್ರಧವಾಗಿದೆ ಎಂದು ತಿಳಿಸಿದರು. ಸದನವು ಒಟ್ಟು ೬೨ ಗಂಟೆ ೪೨ ನಿಮಿಷಗಳ ಕಾಲ ೧೩ ಸಭೆಗಳನ್ನು ನಡೆದಿದೆ.

ನೋಟು ಬ್ಯಾನ್ - ಜ. ೨ ರಂದು ವಿಚಾರಣೆ

ನವದೆಹಲಿ, ಡಿ. ೨೩: ೨೦೧೬ರಲ್ಲಿ ೧ ಸಾವಿರ ಹಾಗೂ ೫೦೦ ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯÃಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಹಲವು ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ, ಜನವರಿ ೨ ರಂದು ತೀರ್ಪು ಪ್ರಕಟಿಸಲಿದೆ. ಸಂವಿಧಾನ ಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಸ್.ಎ. ನಜೀರ್ ಅವರು ಜನವರಿ ೪ ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ ನಿಗದಿತ ದಿನದಂತೆ ಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಡಿಸೆಂಬರ್ ೭ ರಂದು ಸುಪ್ರೀಂ ಕೋರ್ಟ್, ೨೦೧೬ ರ ನೋಟ್ ಬ್ಯಾನ್ ನಿರ್ಧಾರಕ್ಕೆ ಸಂಬAಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ)ಗೆ ನಿರ್ದೇಶನ ನೀಡಿತ್ತು ಮತ್ತು ತೀರ್ಪನ್ನು ಕಾಯ್ದಿರಿಸಿತ್ತು. ೫೦೦ ಮತ್ತು ೧೦೦೦ ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನೊAದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

ಚೀನಾದಲ್ಲಿ ಕೋವಿಡ್ ಉಲ್ಭಣ - ಡಬ್ಲೂö್ಯ.ಹೆಚ್.ಒ. ಕಳವಳ

ಲಂಡನ್, ಡಿ. ೨೩: ಚೀನಾದಲ್ಲಿ ಮಹಾಮಾರಿ ಕೊರೊನಾ ಉಲ್ಭಣಿಸಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸು ಅವರು, ಚೀನಾದಲ್ಲಿನ ಕೋವಿಡ್ ಪರಿಸ್ಥಿತಿಯ ಸಮಗ್ರ ಅಪಾಯದ ಬಗ್ಗೆ ಮೌಲ್ಯಮಾಪನವನ್ನು ಮಾಡಲು ವಿಶ್ವ ಆರೋಗ್ಯ ಸಂಸ್ಥೆಗೆ ಅಲ್ಲಿನ ಸಾಂಕ್ರಾಮಿಕದ ತೀವ್ರತೆ, ಆಸ್ಪತ್ರೆಯ ದಾಖಲಾತಿಗಳ ಮಾಹಿತಿಯ ಅಗತ್ಯವಿದೆ. ಅಲ್ಲದೇ ತೀವ್ರತರವಾದ ಕೋವಿಡ್ ಸಾಂಕ್ರಾಮಿಕದ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆ ಆರೈಕೆ ಘಟಕಗಳ ಬೆಂಬಲದ ಅಗತ್ಯತೆಯ ಮಾಹಿತಿಯ ಅಗತ್ಯವೂ ಎಂದು ಹೇಳಿದ್ದಾರೆ. ಕೋವಿಡ್-೧೯ ಸಾಂಕ್ರಾಮಿಕದ ಮೂಲವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮರ್ಪಕ ಡೇಟಾವನ್ನು ಹಂಚಿಕೊಳ್ಳುವAತೆ ಮತ್ತೊಮ್ಮೆ ಚೀನಾಗೆ ಕರೆ ನೀಡಿದ್ದಾರೆ.