ಶನಿವಾರಸಂತೆ, ಡಿ. ೨೫: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ವಿತರಣೆ, ಮಾರಾಟ ಮತ್ತು ಮರು ಬಳಕೆಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ನಿಷೇಧಿಸಿದ್ದು, ಆ ಆದೇಶದ ಅನ್ವಯ ಶನಿವಾರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ.
ಪಟ್ಟಣದ ಅಂಗಡಿ ಮತ್ತು ಬೇಕರಿಗಳಲ್ಲಿ ನಿಷೇಧಿಸಲಾದ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲಾಯಿತು. ಬಳಕೆ ಮಾಡುತ್ತಿರುವುದು ಕಂಡುಬAದಲ್ಲಿ ದಂಡ ವಿಧಿಸಲಾಗುವುದು. ಕಾನೂನು ಉಲ್ಲಂಘಿಸಿದಲ್ಲಿ ಪರವಾನಗಿ ರದ್ದುಪಡಿಸಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ಎಚ್ಚರಿಸಿದರು.
ಪಂಚಾಯಿತಿ ಸದಸ್ಯರು, ಕಾರ್ಯದರ್ಶಿ ದೇವರಾಜ್, ಬಿಲ್ ಸಂಗ್ರಾಹಕ ವಸಂತ್ ಕುಮಾರ್ ಇದ್ದರು.