ಸೋಮವಾರಪೇಟೆ, ಡಿ. ೨೫: ರಾಜ್ಯ ಸರ್ಕಾರದಿಂದ ಮಡಿಕೇರಿ ವಿಧಾನ ಸಭಾ ಕ್ಷೇತ್ರಕ್ಕೆ ೧೭೫೦ ಮನೆಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ ಸೌಲಭ್ಯ ಒದಗಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
‘ಶಕ್ತಿ’ಯೊಂದಿಗೆ ಈ ಬಗ್ಗೆ ಮಾತನಾಡಿದ ಶಾಸಕರು, ಮಡಿಕೇರಿ ಕ್ಷೇತ್ರಕ್ಕೆ ಸಂಬAಧಿಸಿದAತೆ ೧೭೫೦ ಮನೆಗಳನ್ನು ಬಿಡುಗಡೆಗೊಳಿಸಲಾಗಿದೆ. ವಸತಿ ಸಚಿವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಸಂದರ್ಭ ಸರ್ಕಾರದ ಪರವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಮನೆಗಳನ್ನು ಮಂಜೂರು ಮಾಡಿದ್ದಾರೆ ಎಂದು ರಂಜನ್ ತಿಳಿಸಿದರು.
ಅರ್ಹ ಫಲಾನುಭವಿಗಳಿಗೆ ಮಾತ್ರ ಮನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಯೋಜನೆಯಲ್ಲಿ ದುರುಪಯೋಗವಾಗಲು ಆಸ್ಪದ ನೀಡುವುದಿಲ್ಲ. ಆಶ್ರಯ ಹಾಗೂ ಅಂಬೇಡ್ಕರ್ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು ಎಂದರು.
ಹಿAದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಸಹ ಕೊಡಗಿನ ಬಗ್ಗೆ ಕಾಳಜಿ ಹೊಂದಿದ್ದಾರೆ. ಬೆಳೆಹಾನಿಯಿಂದ ನಷ್ಟಕ್ಕೀಡಾದ ರೈತರ ಖಾತೆಗೆ ಈಗಾಗಲೇ ರೂ. ೧.೧೩ ಕೋಟಿಗೂ ಅಧಿಕ ಪರಿಹಾರ ಹಣ ಜಮಾವಣೆಗೊಂಡಿದೆ ಎಂದು ರಂಜನ್ ಹೇಳಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆಯ ವಾತಾವರಣ ದೂರವಾಗಿದೆ. ಕಳೆದ ೧೫ ದಿನಗಳಲ್ಲಿ ೧೦೦ಕ್ಕೂ ಅಧಿಕ ಕಾಮಗಾರಿಗಳು ಮುಕ್ತಾಯಗೊಂಡಿವೆ. ಸುಮಾರು ೭ ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಇಂಜಿನಿಯ ರಿಂಗ್ ವಿಭಾಗದಿಂದ ೧೦೦ ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿ ನಡೆಯುವ ಸ್ಥಳಕ್ಕೆ ಪ್ರತಿದಿನ ಭೇಟಿ ಕೊಟ್ಟು ಫೋಟೋ ತೆಗೆದು ಪ್ರಗತಿಯ ವಿವರವನ್ನು ವಾಟ್ಸಾಪ್‌ಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಕೊಡ್ಲಿಪೇಟೆ-ಸೋಮವಾರಪೇಟೆ-ಮಡಿಕೇರಿ-ಬೇತ್ರಿ ರಾಜ್ಯ ಹೆದ್ದಾರಿ ಕಾಮಗಾರಿ ೨೬ ಕೋಟಿ ವೆಚ್ಚದಲ್ಲಿ ಚಾಲನೆಗೊಂಡಿದೆ. ಕೊಡ್ಲಿಪೇಟೆಯಲ್ಲಿ ಈಗಾಗಲೇ ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ ನಡೆಯುತ್ತಿದೆ. ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸುವಂತೆ ಸಂಬAಧಿಸಿದ ಅಭಿಯಂತರರಿಗೆ ಸೂಚನೆ ನೀಡ ಲಾಗಿದೆ. ಹಾಗೆಯೇ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಲಾಗಿದೆ ಎಂದು ಅಪ್ಪಚ್ಚು ರಂಜನ್ ಹೇಳಿದರು.