ಮಡಿಕೇರಿ, ಡಿ. ೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ, ಗೋಣಿಕೊಪ್ಪ ಕಾವೇರಿ ಕಾಲೇಜು ಮತ್ತು ವೀರಾಜಪೇಟೆ ದಂತ ಮಹಾ ವಿದ್ಯಾಲಯ ಇವರ ವತಿಯಿಂದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಹಾಗೂ ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಚಾಲನೆ ನೀಡಿದರು.
ನಗರದ ಗಾಂಧಿ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ೨೦೨೩ ರ ಜನವರಿ, ೧ಕ್ಕೆ ೧೮ ವರ್ಷ ಪೂರ್ಣಗೊಂಡ ಎಲ್ಲರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಬೇಕು. ಜೊತೆಗೆ ಚುನಾವಣಾ ಸಂದರ್ಭದಲ್ಲಿ ಮತದಾನ ಮಾಡಬೇಕು.
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಮಾಡುವ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತಹಕ್ಕು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿ.ಪಂ. ಮುಖ್ಯ ಯೋಜನಾಧಿಕಾರಿ ರಾಜ್ಗೋಪಾಲ್ ಮಾತನಾಡಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ರಾಷ್ಟಿçÃಯ ಸೇವಾ ಯೋಜನೆಯ ಮುಖ್ಯಸ್ಥ ಮಹಮ್ಮದ್ ಅಕ್ರಮ್ ಮತದಾನದ ಜಾಗೃತಿ ಅಭಿಯಾನವು ಮಡಿಕೇರಿಯಲ್ಲಿ ಆರಂಭವಾಗಿ ಮೂರ್ನಾಡು ಮತ್ತು ವೀರಾಜಪೇಟೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಗ್ರಾಮ ಮಟ್ಟದಲ್ಲಿಯೂ ಸಹ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ರಾಷ್ಟಿçÃಯ ಸೇವಾ ಯೋಜನೆಯ ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದಾರೆ ಎಂದು ಅವರು ತಿಳಿಸಿದರು. ಎನ್ಎಸ್ಎಸ್ ಅಧಿಕಾರಿ ಕೃಪಾ ಶಂಕರ್, ಜಿ.ಪಂ. ಯೋಜನಾ ಶಾಖೆಯ ನವೀನ್ ಇತರರು ಇದ್ದರು.
ನಗರದ ಗಾಂಧಿ ಮೈದಾನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ, ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಮೂಲಕ ಜಾಥಾ ನಡೆಯಿತು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ. ಮುಖ್ಯ ಯೋಜನಾಧಿಕಾರಿ ರಾಜ್ಗೋಪಾಲ್, ಜಾನಪದ ಪರಿಷತ್ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ. ಅನಿಲ್, ಎನ್ಸಿಸಿ ವಿದ್ಯಾರ್ಥಿಗಳು ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.