ಚೆಯ್ಯಂಡಾಣೆ, ಡಿ. ೨೫: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಕ್ಕಬೆಯ ವಿಎಸ್‌ಎಸ್ ಸಭಾಂಗಣದಲ್ಲಿ "ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ" ಬಗ್ಗೆ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಪನ್ ಅಯ್ಯಪ್ಪ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲ ಅರುಣ್ ಕುಮಾರ್ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಇಲಾಖೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಗ್ರಾ.ಪಂ. ಉಪಾಧ್ಯಕ್ಷೆ ರಶೀನ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ವಿರೂಪಾಕ್ಷ ರೈ, ಗ್ರಾಮ ಪಂಚಾಯಿತಿ ಸದಸ್ಯರು, ವನಧನ ವಿಕಾಸ ಕೇಂದ್ರದ ಅಧ್ಯಕ್ಷೆ ಸರೋಜಿನಿ, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಸುಮಯ್ಯ ನಿರೂಪಿಸಿ, ಶಿಕ್ಷಕಿ ಕವಿತ ಸ್ವಾಗತಿಸಿ, ಅಶ್ವಿನಿ ವಂದಿಸಿದರು. - ಅಶ್ರಫ್