ಮಡಿಕೇರಿ, ಡಿ. ೨೪: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವ ವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಫ್ರೌಢಶಾಲೆಯಲ್ಲಿ ತಾ. ೨೯ ರಿಂದ ಜನವರಿ ೪ ರವರೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ಮಡಿಕೇರಿ ಸ.ಪ್ರ.ದ. ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಿ.ಜೆ. ಜವರಪ್ಪ, ಆಡಳಿತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೆಶಕ ಸಿ. ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಡಿ. ಮಂಜುನಾಥ್, ಕಡಗದಾಳು ಗ್ರಾ.ಪಂ. ಅಧ್ಯಕ್ಷ ಜಯಣ್ಣ, ಪ್ರಾಂತೀಯ ನಿರ್ದೇಶಕ ಖಾದ್ರಿ ನರಸಿಂಹಯ್ಯ, ರಾಜ್ಯ ರಾಷ್ಟಿçÃಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರತಾಪ್ ಲಿಂಗಯ್ಯ, ರಾ.ಸೇ.ಯೋ. ಸಂಯೋಜನಾಧಿಕಾರಿ ಡಾ. ಬಿ. ಚಂದ್ರಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.