ಕಣಿವೆ, ಡಿ. ೨೪: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳೊAದಿಗೆ ಅತ್ಯುತ್ತಮ ಸನ್ನಡತೆಯನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಲು ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕುಶಾಲನಗರ ತಾಲೂಕಿನ ಸುಂದರನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲನ್ನು ಅಗತ್ಯಕ್ಕಷ್ಟೇ ಬಳಸುವ ಮೂಲಕ ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ಹೇಳಿದರು.

ಮುಖ್ಯ ಭಾಷಣಕಾರರಾಗಿದ್ದ ಹುಣಸೂರು ದೇವರಾಜ ಅರಸು ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಗುರುಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿ ಇಟ್ಟು ಮುನ್ನಡೆಯಬೇಕು. ಹೆತ್ತವರು ಹಾಗೂ ಹಿರಿಯರನ್ನು ಗೌರವಿಸಬೇಕು ಎಂದರು. ಕಾಲೇಜು ಪ್ರಾಂಶುಪಾಲ ಪ್ರೊ. ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಕೆ.ವರದ, ವೈಶಾಕ್, ವಿದ್ಯಾರ್ಥಿ ಸಂಘದ ಸಂಚಾಲಕರೂ ಆದ ಉಪನ್ಯಾಸಕ ಡಾ. ಹರ್ಷ, ಎನ್ ಎಸ್ ಎಸ್ ಅಧಿಕಾರಿ ಡಾ.ಸುನಿಲ್ ಕುಮಾರ್, ಮಧುಶ್ರೀ, ಸಾಂಸ್ಕೃತಿಕ ಸಮಿತಿ ಸಂಚಾಲಕ ಚಂದ್ರಶೇಖರ್, ಕ್ರೀಡಾ ಸಂಚಾಲಕ ಸುಧಾಕರ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸಿ. ರಮೇಶ್ ಚಂದ್ರ, ವಿದ್ಯಾರ್ಥಿ ಸಮಿತಿ ಕಾರ್ಯದರ್ಶಿ ಬಿ.ಎಸ್. ತೇಜಸ್ವಿ, ಮಹಿಳಾ ಕಾರ್ಯದರ್ಶಿ ಕೆ.ಎಂ.ನAದಿನಿ, ಸಾಂಸ್ಕೃತಿಕ ಕಾರ್ಯದರ್ಶಿ ಎಲ್. ದಿನುಕುಮಾರ್, ಮಹಿಳಾ ಕಾರ್ಯದರ್ಶಿ ಅಮಿತ ಹೆಂಡ್ರಿ, ಕ್ರೀಡಾ ಕಾರ್ಯದರ್ಶಿ ಪಿ.ಆರ್.ಮದನ್, ಜಂಟಿ ಕಾರ್ಯದರ್ಶಿ ಜೆ.ಸಂಜನ ಇದ್ದರು.