ಹೊಸ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ
ಬೆಂಗಳೂರು, ಡಿ. ೨೫: ರಾಜಕೀಯ ವಲಯದಿಂದ ಕಣ್ಮರೆಯಾಗಿದ್ದ ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಈಗ ಮತ್ತೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದ್ದಾರೆ. ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ ರೆಡ್ಡಿ, ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಘೋಷಿಸಿದರು. ರಾಜ್ಯದಾದ್ಯಂತ ಹೊಸ ಪಕ್ಷವನ್ನು ಸಂಘಟನೆ ಮಾಡುವೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುವೆ. ರಾಜ್ಯದ ಪ್ರತಿಯೊಂದು ಮನೆಗೆ ತೆರಳುತ್ತೇನೆ ಎಂದು ಹೇಳಿದರು. ಮುಂದುವರಿದು, ನನ್ನ ಜೊತೆ ತನ್ನ ಆಪ್ತ ಗೆಳೆಯ ಶ್ರೀರಾಮುಲು ಅವರಿಗೆ ಬರುವಂತೆ ಹೇಳಿಲ್ಲ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಮುಂದಿನ ದಿನಗಳಲ್ಲಿ ನನ್ನ ಪತ್ನಿ ಅರುಣಾ ಲಕ್ಷಿö್ಮ ಅವರು ಸಹ ಪಕ್ಷ ಸಂಘಟನೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುವೆ. ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ ಎಂದರು. ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಹೊಸ ಪಕ್ಷ ಸ್ಥಾಪಿಸಬೇಕಾಯಿತು. ಹೀಗಾಗಿ, ನಾನು ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ. ೧೦ ರಿಂದ ೧೫೫ ದಿನಗಳಲ್ಲಿ ಪಕ್ಷದ ಚಿಹ್ನೆ, ಕಚೇರಿ ಬಗ್ಗೆ ಮಾಹಿತಿ ನೀಡುತ್ತೇನೆ ಎಂದರು. ರಾಜ್ಯ ರಾಜಕಾರಣದಲ್ಲಿ ನನ್ನವರು ಎಂದುಕೊAಡವರಿAದಲೇ ಮೋಸ ಹೋದೆ. ಕಷ್ಟದಲ್ಲಿ ಯಾರೂ ನನ್ನ ಜೊತೆ ನಿಂತಿಲ್ಲ. ಇದನ್ನು ನನ್ನ ಸ್ನೇಹಿತರು ಈಗಲೂ ಹೇಳುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಬಿಟ್ಟು ಇನ್ನು ಯಾವ ನಾಯಕರು ನನ್ನ ಮನೆಗೆ ಬಂದಿಲ್ಲ. ಅವರಿಬ್ಬರು ಮಾತ್ರ ನನಗೆ ಧೈರ್ಯ ಹೇಳಿದರು. ಅವರನ್ನು ನಾನು ನೆನಪು ಮಾಡಿಕೊಳ್ಳುತ್ತೇನೆ ಎಂದು ರೆಡ್ಡಿ ಹೇಳಿದರು.
ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ-ಚೀನಾ ವಿದೇಶಾಂಗ ಸಚಿವ
ಬೀಜಿಂಗ್, ಡಿ. ೨೫: ಚೀನಾ-ಭಾರತ ನಡುವಿನ ಸಂಬAಧಗಳ ಸ್ಥಿರ ಮತ್ತು ಬಲವಾದ ಅಭಿವೃದ್ಧಿಗಾಗಿ ನಾವು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಇತ್ತೀಚೆಗಷ್ಟೇ ವಾಸ್ತವ ನಿಯಂತ್ರಣ ರೇಖೆಯಲ್ಲಿ ಎರಡೂ ದೇಶಗಳ ಯೋಧರ ಸಂಘರ್ಷದ ಬೆನ್ನಲ್ಲೇ ಚೀನಾ ನಾಯಕನ ಈ ಹೇಳಿಕೆ ಮುನ್ನೆಲೆಗೆ ಬಂದಿದೆ. ತವಾಂಗ್ ಪ್ರದೇಶದಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತ ಮತ್ತು ಚೀನಾದ ಸೇನೆಗಳ ನಡುವೆ ಇತ್ತೀಚಿನ ಚಕಮಕಿ ಬಳಿಕ ಚೀನಾದ ವಿದೇಶಾಂಗ ಸಚಿವರ ಈ ಹೇಳಿಕೆ ನೀಡಿದ್ದಾರೆ. ದ್ವಿಪಕ್ಷೀಯ ಸಂಬAಧಗಳ ಬಲವಾದ ಅಭಿವೃದ್ಧಿಗಾಗಿ ಭಾರತದೊಂದಿಗೆ ಕೆಲಸ ಮಾಡಲು ಚೀನಾ ಸಿದ್ಧವಾಗಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಭಾರತದೊಂದಿಗಿನ ಚೀನಾದ ಸಂಬAಧಗಳ ಕುರಿತು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಾಂಗ್, ‘ಚೀನಾ ಮತ್ತು ಭಾರತವು ರಾಜತಾಂತ್ರಿಕ ಮತ್ತು ಮಿಲಿಟರಿಯಿಂದ ಮಿಲಿಟರಿ ಮಾರ್ಗಗಳ ಮೂಲಕ ಸಂವಹನ ನಡೆಸಿದೆ. ಅಲ್ಲದೆ ಗಡಿ ಪ್ರದೇಶಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಎರಡೂ ದೇಶಗಳು ಬದ್ಧವಾಗಿವೆ ಎಂದು ಹೇಳಿದರು.
ಕೊರೊನಾ-ಎಚ್ಚರದಿಂದ ಇರಲು ಮೋದಿ ಕರೆ
ನವದೆಹಲಿ, ಡಿ. ೨೫: ವಿಶ್ವದ ಹಲವು ರಾಷ್ಟçಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದ್ದು, ನಾವೂ ಎಚ್ಚರವಹಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ನ ೯೬ನೇ ಆವೃತ್ತಿಯಲ್ಲಿ ಮಾತನಾಡಿದ ಮೋದಿಯವರು, ಪ್ರಪಂಚದ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ನಾವು ಜಾಗರೂಕರಾಗಿರಬೇಕಿದ್ದು, ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಹಬ್ಬ ಹರಿದಿನಗಳನ್ನು ಎಚ್ಚರಿಕೆಯಿಂದ ಆಚರಿಸುವಂತೆ ಜನತೆಗೆ ಮೋದಿಯವರು ಸಲಹೆ ನೀಡಿದರು.
ಬಂಧನಗೊAಡಿದ್ದ ಕೆಂಪಣ್ಣನಿಗೆ ಜಾಮೀನು
ಬೆಂಗಳೂರು, ಡಿ. ೨೫: ರಾಜ್ಯ ಸರ್ಕಾರದ ವಿರುದ್ಧ ಶೇ. ೪೦ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು ದೊರೆತಿದೆ. ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೆಂಪಣ್ಣ ಸೇರಿ ಒಟ್ಟು ೧೯ ಗುತ್ತಿಗೆದಾರರು ಸುದ್ದಿಗೋಷ್ಠಿ ಮಾಡಿ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ ಕಮೀಷನ್ ಆರೋಪ ಮಾಡಿದ್ದರು. ಈ ಸಂಬAಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕೆಂಪಣ್ಣ ಸೇರಿ ೧೯ ಗುತ್ತಿಗೆದಾರರ ವಿರುದ್ಧ ಮುನಿರತ್ನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದರು. ೮ನೇ ಎಸಿಎಂಎA ನ್ಯಾಯಾಲಯ ಕೆಂಪಣ್ಣ ಸೇರಿ ೧೯ ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಪೊಲೀಸರು ಆರೋಪಿಗಳಾದ ಕೆಂಪಣ್ಣ ಮತ್ತು ಇತರರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ರಾತ್ರಿ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಕೆಂಪಣ್ಣ, ಕೃಷ್ಣಾರೆಡ್ಡಿ, ನಟರಾಜು, ಗುರುಸಿದ್ದಪ್ಪ, ಅಂಬಿಕಾಪತಿ ಸೇರಿ ಐವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.
ವಿದೇಶದಿಂದ ಬಂದ ೭ ಮಂದಿಗೆ ಕೋವಿಡ್
ಬೆಂಗಳೂರು, ಡಿ. ೨೫: ಚೀನಾದಲ್ಲಿ ವ್ಯಾಪಕವಾಗಿ ಅಬ್ಬರಿಸುತ್ತಿರುವ ಕೋವಿಡ್-೧೯ ರೂಪಾಂತರ ಸೋಂಕು ಒಮಿಕ್ರಾನ್ ಬಿಎಫ್.೭ ಭೀತಿ ನಡುವೆಯೇ ಇಂದು ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರ ಪೈಕಿ ೭ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಚೀನಾದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯದ ಎಲ್ಲ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಅದರಂತೆ ಬೆಂಗಳೂರಿನ ಕೆಂಪೇಗೌಡ ಅಂರ್ರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಬಂದಿಳಿದಿದ್ದ ಪ್ರಯಾಣಿಕರ ಪೈಕಿ ೭ ಮಂದಿಯ ಆರ್ಟಿಪಿಸಿಆರ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ಇದು ಒಮಿಕ್ರಾನ್ ರೂಪಾಂತರ ಸೊಂಕೆ ಎಂಬ ಭೀತಿ ಹಬ್ಬಿದೆ. ಮುಂಜಾಗ್ರತಾ ಕ್ರಮವಾಗಿ ಈ ೮ ಮಂದಿಯ ಮಾದರಿಯನ್ನು ಜೆನೋಮ್ ಸೀಕ್ವಿನ್ಸಿಂಗ್ಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನವೆಂಬರ್ನಲ್ಲಿ ಕೆಐಎನಲ್ಲಿ ೮ ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬAದಿತ್ತು. ಎಲ್ಲ ಪಾಸಿಟಿವ್ ಪ್ರಕರಣ ಸ್ವಾಬ್ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗೆ ಲ್ಯಾಬ್ಗೆ ಕಳುಹಿಸಲಾಗುತ್ತಿದೆ.
ವರ್ತಕನ ಹತ್ಯೆ - ಸೆಕ್ಷನ್ ೧೪೪ ಜಾರಿ
ಮಂಗಳೂರು, ಡಿ. ೨೫: ಸುರತ್ಕಲ್ ಠಾಣೆ ವ್ಯಾಪ್ತಿಯ ಕೃಷ್ಣಾಪುರದಲ್ಲಿ ವರ್ತಕ ಜಲೀಲ್ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬAಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ತಾ. ೨೭ರ ತನಕ ಸೆಕ್ಷನ್ ೧೪೪ ಜಾರಿಗೊಳಿಸಿದ್ದಾರೆ. ಜಲೀಲ್ ಅವರು ಕೃಷ್ಣಾಪುರದಲ್ಲಿ ಹೊಂದಿದ್ದ ಅಂಗಡಿಗೆ ನುಗ್ಗಿದ್ದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಶನಿವಾರ ರಾತ್ರಿ ಅವರಿಗೆ ಚೂರಿಯಿಂದ ಇರಿದಿದ್ದರು. ತಕ್ಷಣವೇ ಅಕ್ಕಪಕ್ಕದ ಅಂಗಡಿಯವರು ಹಾಗೂ ಸ್ಥಳೀಯರು ಸೇರಿ ಗಾಯಾಳು ಜಲೀಲ್ ಅವರನ್ನು ಸಮೀಪದ ಶ್ರೀನಿವಾಸ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಅದಾಗಲೇ ಅವರು ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದರು. ಬಜಪೆ, ಸುರತ್ಕಲ್, ಕಾವೂರು, ಪಣಂಬೂರು ಠಾಣೆಗಳ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ ೧೪೪ರ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಆದೇಶ ಮಾಡಿದ್ದಾರೆ.