ಮಡಿಕೇರಿ, ಡಿ. ೨೬: ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸ ಲಾಗಿದೆ. ಅರ್ಜಿಗಳು ಸೇವಾಸಿಂದು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯವಿದೆ. ಫಲಾಪೇಕ್ಷಿಗಳು ‘ಗ್ರಾಮ ಒನ್’ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯುತ್ ಚಾಲಿತ ಮತ್ತು ಅಲ್ಲದ ದ್ವಿ-ಚಕ್ರ/ ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನವನ್ನು ಖರೀದಿಸಲು ಗರಿಷ್ಠ ರೂ.೫೦ ಸಾವಿರ ಸಹಾಯಧನ, ಉಳಿದ ಮೊತ್ತ ಸಾಲ.
ಅರ್ಜಿಯೊಂದಿಗೆ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‌ಕಾರ್ಡ್, ಗುರುತಿನ ಚೀಟಿ, ಆಧಾರ್ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್ (೨ ವೀಲರ್) ಪ್ರತಿ ಸಲ್ಲಿಸಬೇಕು.
ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ನೋಂದಾಯಿತ ಮಹಿಳಾ ಸ್ವ-ಸಹಾಯ ಸಂಘಗಳು): ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ ೧೦ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.೨.೫೦ ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.೧.೫೦ ಲಕ್ಷ ಸಹಾಯಧನ ಮತ್ತು ರೂ.೧ ಲಕ್ಷ ಸಾಲ.
ಅರ್ಜಿಯೊಂದಿಗೆ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‌ಕಾರ್ಡ್, ಗುರುತಿನ ಚೀಟಿ, ಆಧಾರ್ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಸಂಘ ನೋಂದಣಿಯಾಗಿರುವ ಪ್ರತಿ, ಸಂಘದ ನಡವಳಿ, ಸಂಘದ ಪಾಸ್ ಪುಸ್ತಕ, ಸಂಘದ ಗ್ರೂಪ್ ಫೋಟೋ ಒದಗಿಸಬೇಕು.
ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ. ೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹೇಳಿದ್ದಾರೆ.