ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಬೆಳಗಾವಿ, ಡಿ. ೨೬: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್‌ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಎಸ್‌ಸಿ-ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ ೨೦೨೨ ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.೧೫ ರಿಂದ ೧೭ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.೩ ರಿಂದ ಶೇ.೭ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ. ಆರು ತಿಂಗಳೊಳಗೆ ಈ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ಈ ಅಧಿವೇಶನದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡಿಸಿ, ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಂತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ.

ಪಾಕ್ ಮೀನುಗಾರಿಕಾ ದೋಣಿಯಿಂದ ಡ್ರಗ್ಸ್, ಶಸ್ತಾçಸ್ತçಗಳು ವಶ!

ಗುಜರಾತ್, ಡಿ. ೨೬: ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಸೋಮವಾರ ಭಾರತೀಯ ಜಲಪ್ರದೇಶದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ ೩೦೦ ಕೋಟಿ ರೂಪಾಯಿ ಮೌಲ್ಯದ ಶಸ್ತಾçಸ್ತç್ರಗಳು, ಮದ್ದು ಗುಂಡುಗಳು ಮತ್ತು ೪೦ ಕೆ.ಜಿ. ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ ೧೦ ಮಂದಿ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಗುಜರಾತ್ ಎಟಿಎಸ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಮೀನುಗಾರಿಕಾ ಬೋಟ್ ಅಲ್ ಸೊಹೆಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೋಸ್ಟ್ ಗಾರ್ಡ್ ಟ್ವೀಟ್‌ನಲ್ಲಿ ತಿಳಿಸಿದೆ. ಶೋಧ ಕಾರ್ಯಾಚರಣೆಯಲ್ಲಿ ೩೦೦ ಕೋಟಿ ರೂಪಾಯಿ ಮೌಲ್ಯದ ಸುಮಾರು ೪೦ ಕೆಜಿ ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಓಖಾಗೆ ದೋಣಿಯನ್ನು ತರಲಾಗುತ್ತಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ.

ಬೆಂಗಳೂರಿನಲ್ಲಿ ೨೨ ಸೇರಿ ಇಂದು ೨೩ ಮಂದಿಗೆ ಪಾಸಿಟಿವ್

ಬೆಂಗಳೂರು, ಡಿ. ೨೬: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯ ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ೨೩ ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೪೦,೭೧,೮೨೧ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ ೪೦೨೬೫ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೨೨ ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೮೭೬೬೧೨ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೊನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು ೪೦ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೪೦,೩೦,೨೧೫ಕ್ಕೆ ಏರಿಕೆಯಾಗಿದೆ. ಇನ್ನು ೧೨೨೯ ಸಕ್ರಿಯ ಪ್ರಕರಣಗಳಿವೆ.