ಮಡಿಕೇರಿ, ಡಿ. ೨೭: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ ಅದನ್ನು ಈಡೇರಿಸುವ ಕುರಿತು ವಿಧಾನ ಪರಿಷತ್‌ನಲ್ಲಿ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮನವಿ ಮಾಡಿದರು.

ಶೂನ್ಯ ವೇಳೆಯಲ್ಲಿ ಈ ಬಗ್ಗೆ ಸುಜಾ ವಿಷಯ ಪ್ರಸ್ತಾಪಿಸಿ ಗಮನ ಸೆಳೆದರು. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲರ್ಕ್, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ‘ಸಿ’ ದರ್ಜೆಗೆ ಏರಿಸಬೇಕು ಮತ್ತು ಅಟೆಂರ‍್ಸ್, ಕ್ಲೀನರ್, ವಾಟರ್‌ಮನ್ ಮೊದಲಾದ ಹುದ್ದೆಯನ್ನು ‘ಡಿ’ ದರ್ಜೆಗೇರಿಸುವ ಮೂಲಕ ನಗರ ಮತ್ತು ಪಟ್ಟಣ ಪಂಚಾಯಿತಿಯಲ್ಲಿರುವAತೆ ಪಂಚಾಯಿತಿ ನೌಕರರಿಗೂ ಕನಿಷ್ಟ ವೇತನದ ಬದಲು ವೇತನ ಶ್ರೇಣಿ ನಿಗದಿಪಡಿಸಬೇಕು.

ಜೊತೆಗೆ ನೌಕರರು ಮತ್ತು ನೌಕರರ ನಿವೃತ್ತ ಜೀವನಕ್ಕೆ ಆರ್ಥಿಕ ಭದ್ರತೆ ಕಲ್ಪಿಸಬೇಕು ಹಾಗೂ ರಾಜ್ಯದಲ್ಲಿರುವ ಎಲ್ಲಾ ನೌಕರರಿಗೂ ಒಂದು ಬಾರಿ ಜಿಲ್ಲಾ ಪಂಚಾಯಿತಿಯಿAದ ಕಡ್ಡಾಯವಾಗಿ ಅನುಮೋದನೆ ನೀಡಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಪರಿಗಣಿಸುವಂತೆ ಅವರು ಮನವಿ ಮಾಡಿದರು.