ಸಿದ್ದಾಪುರ, ಡಿ. ೨೬: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಘಟಕವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಉದ್ಘಾಟಿಸಿದರು. ಜನವಾದಿ ಮಹಿಳಾ ಸಂಘದ ಸದಸ್ಯತ್ವಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ನೆಲ್ಲಿಹುದಿಕೇರಿ, ಬರಡಿ, ಕಾರಬಾಣೆ, ಜ್ಯೋತಿ ನಗರಗಳಲ್ಲಿ ಜನವಾದಿ ಸಂಘಟನೆಯ ಘಟಕಗಳನ್ನು ಪ್ರಾರಂಭಿಸಿ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ಕಾರ್ಮಿಕ ಮುಖಂಡ ಪಿ.ಆರ್. ಭರತ್, ಉದಯ ಕುಮಾರ್ ಹಾಜರಿದ್ದರು.