ಮಡಿಕೇರಿ, ಡಿ. ೨೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಅವರ ೧೧೯ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಾ. ೨೯ ರಂದು ಅಪರಾಹ್ನ ೩ ಗಂಟೆಗೆ ಕೊಡಗು ಪತ್ರಿಕಾ ಭವನ ಟ್ರಸ್ಟಿನ ಸಭಾಂಗಣದಲ್ಲಿ ಆಚರಿಸಲಾಗುವದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ರವರು ವಹಿಸಲಿದ್ದು, ಉದ್ಘಾಟನೆಯನ್ನು ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವೇರಿ ಪ್ರಕಾಶ್ ನೆರವೇರಿಸಲಿದ್ದಾರೆ.

ಕುವೆಂಪು ಬದುಕು ಬರಹದ ಕುರಿತು ಉಪನ್ಯಾಸವನ್ನು ಸೋಮವಾರಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ನೀಡಲಿದ್ದಾರೆ. ವೈಚಾರಿಕತೆ ನೆಲೆಯಲ್ಲಿ ಕುವೆಂಪು ಎಂಬ ವಿಷಯದ ಕುರಿತು ಸಾಹಿತಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಬಿ.ಆರ್. ಜೋಯಪ್ಪ ಉಪನ್ಯಾಸ ನೀಡಲಿದ್ದಾರೆ.

ನಂತರ ಕುವೆಂಪು ರಚಿತ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಉದಯೋನ್ಮುಖ ಗಾಯಕರಾದ ರಕ್ಷಾ ಪ್ರಭಾಕರ್, ಅಮೃತ್ ರಾಜ್, ಸೆಲೋಮಿ ಶೀಲಾ, ಪಾಂಡಿ ಕೀರ್ತಿ ಗಿರೀಶ್, ಅನಿತ್‌ರಾಜ್, ಚೊಕ್ಕಾಡಿ ಪ್ರೇಮ ರಾಘವಯ್ಯ ಹಾಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.