ಕುಶಾಲನಗರ, ಡಿ. ೨೬: ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಕುಶಾಲನಗರದಲ್ಲಿ ನಡೆಯಿತು. ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀಗಳಾದ ಜ್ಞಾನಪ್ರಕಾಶ ಸ್ವಾಮೀಜಿ ಶಾಖೆಯ ಉದ್ಘಾಟನೆ ನೆರವೇರಿಸಿದರು. ಸಂಘದ ಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬುದ್ಧ ಮತ್ತು ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಶೇರು ಪತ್ರ ವಿತರಣೆ ಮಾಡಿದರು. ಕುಶಾಲನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಡಿ. ಚಂದ್ರು ಅವರು ಪಾಸ್ ಬುಕ್ ವಿತರಣೆ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಇಂದಿರಮ್ಮ ಅವರು ಸಾಲದ ಚೆಕ್ ವಿತರಣೆ ಮಾಡಿದರು. ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ಕಚೇರಿ ಉದ್ಘಾಟಿಸಿದರು.
ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಸ್.ಎಸ್. ನಂದಿನಿ, ವಾಲ್ಮೀಕಿ ಪರಿಶಿಷ್ಟ ಪಂಗಡ ಜಿಲ್ಲಾಧ್ಯಕ್ಷ ಕೆ.ಎನ್. ಅಶೋಕ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಹಾಲಿಂಗಯ್ಯ, ಎಸ್ಸಿ-ಎಸ್ಟಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಪ್ಪ, ಐಲಾಪುರ ರಾಮು, ಸಂಘದ ನಿರ್ವಹಣಾ ಸಮಿತಿಯ ಸದಸ್ಯರು ಮತ್ತಿತರರು ಇದ್ದರು.