ಸಿದ್ದಾಪುರ, ಡಿ. ೨೬: ಸಿದ್ದಾಪುರದ ಅವರೆಗುಂದದಲ್ಲಿ ಭಾನುವಾರದಂದು ಮನೆಯ ಮಾಲೀಕನನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ನಗದು ಹಾಗೂ ಚಿನ್ನಾಭರಣಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ.

ಸಿದ್ದಾಪುರ ಕರಡಿಗೋಡು ಗ್ರಾಮದ ಅವರೆಗುಂದ ನಿವಾಸಿ ಎಂ.ಎA. ಚಂಗಪ್ಪ ಅವರು ತಮ್ಮ ಮನೆಯಲ್ಲಿ ಒಂಟಿಯಾಗಿ ಇರುವ ಸಂದರ್ಭದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಚಂಗಪ್ಪ ಅವರ ಮೇಲೆ ಹಲ್ಲೆ ನಡೆಸಿ ಪ್ಲಾಸ್ಟಿಕ್ ಹಗ್ಗದಿಂದ ಕೈ-ಕಾಲುಗಳನ್ನು ಕಟ್ಟಿ ಹಾಕಿ, ಬೆದರಿಸಿ ಮನೆಗೆ ನುಗ್ಗಿ ೯೦ ಸಾವಿರ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ದರೋಡೆ ಮಾಡಿದ ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ೩ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿರುವುದಾಗಿ ತಿಳಿದು ಬಂದಿದೆ.