ಮುಳ್ಳೂರು, ಡಿ. ೨೭: ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ೨೦೨೨-೨೩ನೇ ಸಾಲಿನ ವಾರ್ಷಿಕ ಶಿಬಿರ ತಾ. ೩೦ ರಿಂದ ಜನವರಿ ೫ ರವರೆಗೆ ಊರುಗುತ್ತಿ (ಕ್ಯಾತಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ತಾ. ೩೦ ರಂದು ಮಧ್ಯಾಹ್ನ ೨.೩೦ ಗಂಟೆಗೆ ಪ್ರಾರಂಭವಾಗಲಿರುವ ವಾರ್ಷಿಕ ಶಿಬಿರವನ್ನು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಉದ್ಘಾಟಿಸಲಿದ್ದು, ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಕೆ.ಹೆಚ್. ಯೋಗೇಂದ್ರ ಶಿಬಿರದ ಕುರಿತು ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯರಾದ ಮೋಕ್ಷಿತ್‌ರಾಜ್, ಬಿ.ಡಿ. ದಾಕ್ಷಾಯಿಣಿ ಕಾಂತರಾಜ್, ಬ್ಯಾಡಗೊಟ್ಟ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಗಣೇಶ್, ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವೀಶ್, ಊರುಗುತ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವಿ.ಪಿ. ರಾಧ ಮುಂತಾದವರು ಪಾಲ್ಗೊಳ್ಳಲಿದ್ದಾರೆ.