ಭಾಗಮಂಡಲ, ಡಿ. ೨೬: ಭಾಗಮಂಡಲ ಗ್ರಾಮ ಪಂಚಾಯಿತಿ, ಅಯ್ಯಂಗೇರಿ ಗ್ರಾಮ ಪಂಚಾಯಿತಿ, ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜು, ಭಾಗಮಂಡಲ ಸಂಜೀವಿನಿ ಒಕ್ಕೂಟ, ಅಯ್ಯಂಗೇರಿಯ ಸಂಜೀವಿನಿ ಒಕ್ಕೂಟ ಹಾಗೂ ಭಾಗಮಂಡಲ ನಾಡು ಗೌಡ ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಭಾಗಮಂಡಲದ ಚೆದುಕಾರು ಸೇತುವೆಯಿಂದ ತಲಕಾವೇರಿಯ ವರೆಗೆ ಸುಮಾರು ೧೨ ಕಿಲೋಮೀಟರ್ ರಸ್ತೆಯುದ್ದಕ್ಕೂ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಸ್ವಚ್ಛತಾ ಕಾರ್ಯಕ್ಕೆ ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ದಿವಾಕರ್ ಕುಂದಲ್‌ಪಾಡಿ ಚಾಲನೆ ನೀಡಿ ಮಾತನಾಡಿ, ಸ್ವಚ್ಛತಾ ಆಂದೋಲನಕ್ಕೆ ಜನಜಾಗೃತಿ ಇದ್ದರೂ ಭಾಗಮಂಡಲ ವ್ಯಾಪ್ತಿಯಲ್ಲಿ ಸಾಕಷ್ಟು ತ್ಯಾಜ್ಯಗಳು ಕಂಡುಬರುತ್ತಿವೆ
ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸ್ವಚ್ಛತಾ ಆಂದೋಲನಕ್ಕೆ ಬಳಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಸ್ವಚ್ಛತೆಗೆ ಕೈಜೋಡಿಸಿದಲ್ಲಿ ಪರಿಸರ ಸ್ವಚ್ಛವಾಗಲಿದೆ ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಂದ ಹಾಗೂ ಪ್ರವಾಸಿಗರಿಂದ ಭಾಗಮಂಡಲ ವ್ಯಾಪ್ತಿಯಲ್ಲಿ ಕಸ ತ್ಯಾಜ್ಯಗಳು ಹೆಚ್ಚುತ್ತಿವೆ. ಈ ಬಗ್ಗೆ ಜಾಗೃತರಾಗಬೇಕಾದ ಅವಶ್ಯಕತೆ ಇದೆ. ಮಕ್ಕಳಲ್ಲಿ ಜಾಗೃತಿ ಉಂಟಾದರೆ ಮುಂದಿನ ದಿನಗಳಲ್ಲಿ ಕ್ಷೇತ್ರಗಳ ಸ್ವಚ್ಛತೆ ಆಗಲಿವೆ ಎಂದರು.
ಭಾಗಮAಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತಾ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಜಿತ್, ಸದಸ್ಯರಾದ ನಾಗೇಶ್, ಜಯಂತ್ ನಿತ್ಯಾನಂದ ,ವೀಣಾ,ಶಶಿಕಲ, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ೬೦ ವಿದ್ಯಾರ್ಥಿಗಳು ಸೇರಿದಂತೆ ನೂರಕ್ಕೂ ಅಧಿಕ ಮಂದಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
-ಸುನಿಲ್