ಗೋಣಿಕೊಪ್ಪಲು, ಡಿ. ೨೬: ಕೊಡಗು ಜಿಲ್ಲೆಯಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶಾದಾಯಕ ಬೆಳವಣಿಗೆಯಾಗಲಿದೆ. ಮತದಾರ ಕಾಂಗ್ರೆಸ್ ಪರ ಒಲವು ತೋರುತ್ತಿ ದ್ದಾರೆ. ಆ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕು. ಈಗಾಗಲೇ ಎಲ್ಲಾ ಬೂತ್‌ಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ, ಹೈಕೋರ್ಟ್ ಹಿರಿಯ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.
ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪಕ್ಷದ ವರಿಷ್ಠರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲೆಯ ಉದ್ದಗಲಕ್ಕೂ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷದಿಂದ ಹೊರ ಗುಳಿದಿದ್ದ, ಅಸಮಾಧಾನಿತ ನಾಯಕ ರನ್ನು ಮನವೊಲಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ನೂರಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಡಿಸಿಸಿ ಮಾಜಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ, ಹಿರಿಯ ಮುಖಂಡರಾದ ಎರ್ಮು ಹಾಜಿ, ಗೋಣಿಕೊಪ್ಪ ನಗರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅಜಿತ್ ಅಯ್ಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿ ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಆಶಾದಾಯಕ ಬೆಳವಣಿಗೆ ಕಂಡು ಬರುತ್ತಿದೆ. ಒಗ್ಗಟ್ಟಿನ ಮೂಲಕ ಕಾರ್ಯಕರ್ತರು ಪಕ್ಷದ ಕೆಲಸ ನಿರ್ವಹಿಸಿ ಮುಂದಿನ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯನ್ನು ಗೆಲ್ಲಿಸಲು ಪಣತೊಡ ಬೇಕೆಂದರು.
ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಕೋಳೆರ ಭಾರತಿ, ಯುವ ಕಾಂಗ್ರೆಸ್‌ನ ಅಧ್ಯಕ್ಷ ನಾಮೇರ ಅಂಕಿತ್, ಎಸ್.ಟಿ. ಘಟಕದ ಅಧ್ಯಕ್ಷ ಮಣಿಕುಂಞ, ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರಾದ ಕೊಲ್ಲಿರ ಬೋಪಣ್ಣ, ಪ್ರಶಾಂತ್, ಮತ್ರಂಡ ದಿಲ್ಲು, ಪಿ.ಕೆ. ಪ್ರವೀಣ್, ಪಿ.ಆರ್. ಪಂಕಜ, ಕಡೇಮಾಡ ಕುಸುಮ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಕಾಂಗ್ರೆಸ್ ಅಧ್ಯಕ್ಷ ಶಾಜಿ ಅಚ್ಚುತ್ತನ್ ನಿರೂಪಿಸಿ, ಪ್ರಮೋದ್ ಗಣಪತಿ ವಂದಿಸಿದರು.