ಸೋಮವಾರಪೇಟೆ, ಡಿ. ೨೬: ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯಗಳು ಬಳಸಿಕೊಂಡಲ್ಲಿ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ಸ್ಥಳೀಯ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜು ಹೇಳಿದರು.

ಕಾಲೇಜಿನಲ್ಲಿ ಆಯೋಜಿಸಿದ್ದ ೨೦೨೨-೨೩ನೇ ಸಾಲಿನ ರಾಷ್ಟಿçÃಯ ಸೇವಾ ಯೋಜನಾ ಘಟಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ರೆಡ್‌ಕ್ರಾಸ್ ಘಟಕ ಸಮಿತಿಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಮಾನವ ಸಂಪನ್ಮೂಲಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ವಿದ್ಯಾರ್ಥಿಗಳ ಪ್ರಗತಿ ಸಾಧ್ಯವಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಮುಂದೆ ಸಾಗಬೇಕೆಂದರು.

ರಾಷ್ಟಿçÃಯ ಸೇವಾ ಯೋಜನಾ ಘಟಕದ ಸಂಚಾಲಕಿ ಕೆ.ಹೆಚ್. ಧನಲಕ್ಷಿö್ಮ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಭಾವನೆ, ನಾಗರಿಕ ಪ್ರಜ್ಞೆ ಮತ್ತು ಶ್ರಮದ ಮಹತ್ವವನ್ನು ತಿಳಿಸಿಕೊಡುತ್ತದೆ. ಇಂದಿನ ಸಮಾಜದಲ್ಲಿ ಸಹಬಾಳ್ವೆಗೆ ಬೇಕಾದ ಎಲ್ಲ ಗುಣಗಳನ್ನು ವಿದ್ಯಾರ್ಥಿದೆಸೆಯಲ್ಲಿ ಬಿತ್ತುತ್ತದೆ ಎಂದರು.

ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿಕೋಶದ ಸಂಚಾಲಕ ಎಂ.ಎಸ್. ಶಿವಮೂರ್ತಿ, ನ್ಯಾಕ್ ಮೌಲ್ಯಮಾಪನ ಪ್ರಕ್ರಿಯೆ ಮತ್ತು ರಾಷ್ಟಿçÃಯ ಶಿಕ್ಷಣ ನೀತಿ-೨೦೨೦ರ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.