ಮಡಿಕೇರಿ, ಡಿ. ೨೮: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ಅತೀ ಸಣ್ಣ ಕೈಗಾರಿಕಾ ಘಟಕ ಪ್ರಾರಂಭಿಸಲು ಶೇ. ೬೦ ರ ಸಹಾಯಧನ, ಸಾಫ್ಟ್ ಸೀಡ್ ಕ್ಯಾಪಿಟಲ್, ಸಾಲ ಸಂಸ್ಕರಣಾ ಶುಲ್ಕ ಮರುಪಾವತಿ ಹಾಗೂ ವಿದ್ಯುಚ್ಛಕ್ತಿ ತೆರಿಗೆ ಮರುಪಾವತಿ ಬಾಫ್ತುಗಳಡಿ ಆರ್ಥಿಕ ಸೌಲಭ್ಯ ಕಲ್ಪಿಸಲಾಗುವುದು. ಅತೀ ಸಣ್ಣ ಕೈಗಾರಿಕೆ ಪ್ರಾರಂಭಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ (ದೂ. ೦೮೨೭೨-೨೨೮೪೩೧/ ೨೨೮೭೪೬)ನ್ನು ಸಂಪರ್ಕಿಸಬಹುದೆAದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.