ಸೋಮವಾರಪೇಟೆ, ಡಿ. ೨೮: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಕ್ಕಲಿಗ ಗೌಡ ಸಂಘದ ವಾರ್ಷಿಕ ಮಹಾಸಭೆ ಐಗೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಭಾಗವಹಿಸಿ ಮಾತನಾಡಿ, ಜನಾಂಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಗಮನ ಹರಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರೂ ರಾಜಕೀಯ ರಹಿತವಾಗಿ ಸಂಘದ ಬಲವರ್ಧನೆಗೆ ಶ್ರಮಿಸಬೇಕು ಎಂದು ಹೇಳಿದರು.
ಸಂಘದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ದಾನಿಗಳಿಂದ ಹಣ ಸಂಗ್ರಹದೊAದಿಗೆ ಭವನ ನಿರ್ಮಿಸಲು ತೀರ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಡಿ.ಎಸ್. ಚಂಗಪ್ಪ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಪ್ರಮುಖರಾದ ಎಂ.ಎಲ್. ನಾಗೇಶ್, ಡಿ.ಡಿ. ಬೆಳ್ಯಪ್ಪ, ಲಿಂಗೇರಿ ರಾಜೇಶ್, ಡಿ.ಡಿ. ಪೆಮ್ಮಯ್ಯ ಇದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.