ಮಡಿಕೇರಿ, ಡಿ. ೨೯: ಸರ್ಕಾರಿ ಪದವಿಪೂರ್ವ ಕಾಲೇಜಿನ ೨೦೨೨-೨೩ ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ತಾ. ೩೦ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರು ಮತ್ತು ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾದ ಅಂಕಿತಾ ಸುರೇಶ್, ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷÀ ಎ.ಪಿ. ಧನಂಜಯ, ಪ್ರಾಂಶುಪಾಲರಾದ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.