ಕೂಡಿಗೆ, ಡಿ. ೨೯: ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ಶ್ರೀ ಸತ್ಯನಾರಾಯಣ ವ್ರತಾಚರಣಾ ಸಮಿತಿಯ ವತಿಯಿಂದ ಕಿರು ಷಷ್ಠಿಯ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿ ಯಿಂದ ನಡೆಯಿತು. ಇದರ ಅಂಗವಾಗಿ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಭಿಷೇಕ, ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ನವೀನ್ ಭಟ್ ಮತ್ತು ಕೃಷ್ಣ ಮೂರ್ತಿ ನೇತೃತ್ವದಲ್ಲಿ ನಡೆದವು. ಮಧ್ಯಾಹ್ನ ಮಹಾ ಮಂಗ ಳಾರತಿ ಸೇರಿದಂತೆ ಪ್ರಸಾದ ವಿನಿಯೋಗ ನಡೆದು ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಕಿರು ಷಷ್ಠಿಯ ಅಂಗವಾಗಿ ದೇವಾಲಯದ ಆವರಣದಲ್ಲಿ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಮೆರವಣಿಗೆ, ಸೇರಿದಂತೆ ಪೂಜಾ ಕೈಂಕರ್ಯಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಕೂಡಿಗೆ ಕೂಡುಮಂಗಳೂರು ಸೇರಿದಂತೆ ವಿವಿಧೆಡೆಯ ಭಕ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸತ್ಯನಾರಾಯಣ ವ್ರತಾಚರಣಾ ಸಮಿತಿಯ ಅಧ್ಯಕ್ಷ ಕಾರ್ಯದರ್ಶಿ ಸೇರಿದಂತೆ ಸದಸ್ಯರು ಹಾಗೂ ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಸದಸ್ಯರು ಹಾಜರಿದ್ದರು.