ಮಡಿಕೇರಿ, ಡಿ. ೨೯: ಮಡಿಕೇರಿ ವಕೀಲರ ಸಂಘದ ವತಿಯಿಂದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯ ಮೂರ್ತಿಯವರಾದ ವೇದವ್ಯಾಸಚಾರ್ ಶ್ರೀಷಾನಂದ ಅವರು ವಕೀಲರ ಸಂಘಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನ್ಯಾಯಾಮೂರ್ತಿಗಳು, ವಕೀಲ ವೃತ್ತಿ ಪವಿತ್ರ ವೃತ್ತಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕ ಬೇಕಾಗುತ್ತದೆ. ವಕೀಲರು ಸಾಮಾಜಿಕ ಬದ್ಧತೆ ಮತ್ತು ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕಾಗುತ್ತದೆ ಎಂದು ನುಡಿದರು. ನ್ಯಾಯಾಲಯದಲ್ಲಿ ಬಾಕಿ ಇರುವ ಹಳೆಯ ಕೇಸುಗಳನ್ನು ಇತ್ಯರ್ಥ ಪಡಿಸುವತ್ತ ವಕೀಲರು ಮತ್ತು ನ್ಯಾಯಧೀಶರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಡಗು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಭ್ರಂಗೇಶ್ ಅವರು ಮಾತನಾಡಿ, ನ್ಯಾಯಾಂಗ ಮತ್ತು ವಕೀಲರು ಪರಸ್ಪರ ಸಹಕಾರದಿಂದ ಕೆಲಸ ಮಾಡಿದಾಗ ನ್ಯಾಯ ವಂಚಿತ ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ ನ್ಯಾಯ ಮೂರ್ತಿಯವರನ್ನು ಸನ್ಮಾನಿಸಿದರು. ಈ ಸಂದರ್ಭ ಹೊಸದಾಗಿ ನಿರ್ಮಾಣ ಹಂತದಲ್ಲಿರುವ ವಕೀಲರ ಭವನದ ಕಾಮಗಾರಿ ಯನ್ನು ಆದಷ್ಟು ಶೀಘ್ರದಲ್ಲಿ ಪೂರೈಸಿ ಕೊಡಲು ಮನವಿ ಮಾಡಿದ್ದು, ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ನ್ಯಾಯಮೂರ್ತಿಯವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಂಬAಧಿಸಿದ ಅಭಿಯಂತರರಿಗೆ ಸೂಕ್ತ ಮಾರ್ಗದರ್ಶನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರೈಸುವಂತೆ ನಿರ್ದೇಶಿಸಿದರು.
ಈ ಸಂದರ್ಭ ಒಂದನೇ ಅಪರ ಜಿಲ್ಲಾ ಮತ್ತು ಸತ್ರರಾದ ಪ್ರಶಾಂತಿ ಜಿ., ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶೆ ಎನ್.ಬಿ. ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾ ಧೀಶರಾದ ಮುನಿರತ್ನಮ್ಮ ಸಿ.ಎನ್., ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ಎನ್.ಎ. ಹಾಜರಿದ್ದರು.
ವಕೀಲರ ಸಂಘದ ಕಾರ್ಯ ದರ್ಶಿ ಎಂ.ಕೆ. ಅರುಣ ಕುಮಾರ್ ಸ್ವಾಗತಿಸಿ, ವಂದಿಸಿದರು. ಸಮಾ ರಂಭದಲ್ಲಿ ಜಂಟಿ ಕಾರ್ಯ ದರ್ಶಿ ಎಂ.ವಿ. ಸಂಜಯರಾಜ್, ಖಜಾಂಚಿ ಬಿ.ಸಿ. ದೇವಿಪ್ರಸಾದ್, ಸಂಘದ ಪದಾಧಿಕಾರಿಗಳಾದ ಡಿ.ಕೆ. ರಾಜೇಶ್, ಡಿ.ಎನ್. ಡೊಮಿನಿಕ್, ತಾಹ ಯಾಸೀನ್, ಪಿ.ಬಿ. ದಿವ್ಯಾ ನಂಜಪ್ಪ ಹಾಗೂ ಸಂಘದ ಸದಸ್ಯರು ಹಾಜರಿದ್ದರು.