ಮಡಿಕೇರಿ, ಡಿ. ೨೯: ನಗರದ ಹೊಸ ಬಡಾವಣೆಯ ಪ್ರಸನ್ನ ಗಣಪತಿ ದೇವಾಲಯದ ೨೨ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಪ್ರಸನ್ನ ಗಣಪತಿಗೆ ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ ಮತ್ತು ಅಲಂಕಾರ ಪೂಜೆ ನಡೆದು ಮಹಾಗಣಪತಿ ಹೋಮ ಹಾಗೂ ನವಕಲಶ ಪೂಜೆ ನೆರವೇರಿತು.
ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ಸತ್ಯನಾರಾಯಣ ಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.