ಮಡಿಕೇರಿ, ಡಿ. ೨೮: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚಿಸಿದರು.
ಉಪ ಯೋಜನೆ ಕಾರ್ಯಕ್ರಮದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಅವರು ಪ್ರತೀ ತಿಂಗಳು ಪ್ರಗತಿ ಸಂಬAಧಿಸಿದAತೆ ಸಬೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂಬAಧ ವಿವಿಧ ಇಲಾಖೆಗಳು ಕಾರ್ಯಕ್ರಮ ಅನುಷ್ಠಾನ ಪ್ರಗತಿ ಸಂಬAಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶೇಖರ್ ಮಾಹಿತಿ ನೀಡಿದರು. ಪ್ರತಿಯೊಂದು ಇಲಾಖೆಗಳು ಗೂಗಲ್ ಸ್ಪೆçಡ್ ಶೀಟ್‌ನಲ್ಲಿ ಪ್ರಗತಿ ವರದಿ ಅಪ್‌ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪೌರ ಕಾರ್ಮಿಕರ ಕುಂದು ಕೊರತೆ ಆಲಿಸಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಿಸಲಾಗುವುದು. ಸರ್ಕಾರ ನೀಡುವ ಹಣದ ಜೊತೆಗೆ ಸ್ವತಃ ಮನೆ ನಿರ್ಮಿಸಿಕೊಳ್ಳಲು ಮುಂದೆ ಬಂದಲ್ಲಿ ಅದಕ್ಕೂ ಅವಕಾಶ ನೀಡಲಾಗುವುದು ಎಂದರು.
ಪೌರ ಕಾರ್ಮಿಕ ಓಬಳಿ ಅವರು ಆರೋಗ್ಯ ವಿಮೆ ಭರಿಸಿಕೊಡುವಂತೆ ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು. ಪೌರಕಾರ್ಮಿಕರಾದ ಲೋಕೇಶ್ ಮತ್ತು ಪುಟ್ಟಮ್ಮ ಅವರು ಪೌರಕಾರ್ಮಿಕರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಿವೃತ್ತ ಪೌರ ಕಾರ್ಮಿಕರಿಗೂ ಮನೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರಲ್ಲಿ ಲೋಕೇಶ್ ಕೋರಿದರು.