ಮಡಿಕೇರಿ, ಡಿ. ೨೯: ಕೊಡಗು ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮಡಿಕೇರಿಯ ಜಲ್ ಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯಾದ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾದ್ಯಾಂತ ಜಲ್ ಜೀವನ್ ಮಿಷನ್ ಅನುಷ್ಠಾನ ಕುರಿತು ಹಾಗೂ ಸ್ವಚ್ಛ ಭಾರತ ಮಿಷನ್ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಅವರ ಮಾರ್ಗ ದರ್ಶನದಂತೆ ಮಾತದಾನ ಜಾಗೃತಿ ಕುರಿತು ಆಟೋ ಪ್ರಚಾರ ವಾಹಿನಿ ಮೂಲಕ ಜಿಲ್ಲಾದ್ಯಂತ ಜನರಿಗೆ ಜಾಗೃತಿ ಮೂಡಿಸಲು ಮುಂದಿನ ೧೫ ದಿನಗಳು ಆಟೋ ಪ್ರಚಾರ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅತಿಥಿಗಳಾದ ಕೊಡಗು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಧನ್‌ರಾಜ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಜಗದೀಶ, ಕೊಡಗು ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿರಾ ಮಲ್ಲಿಕಾರ್ಜುನ್, ಜಲ್ ಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯಾದ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ತಂಡದ ನಾಯಕ ಮತ್ತು ಸದಸ್ಯಸರು, ಜಲ್ ಜೀವನ್ ಮಿಷನ್ ಮತ್ತು ಜಿಲ್ಲಾ ಪಂಚಾಯಿತಿಯ ವಿವಿಧ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ್‌ರಾಜ್ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಕೊಡಗು ಜಿಲ್ಲಾದ್ಯಂತ ಅನುಷ್ಠಾನ ಮಾಡುತ್ತಿದ್ದು, ಇದಕ್ಕೆ ಸಂಭAದಿಸಿದAತೆ ಆಟೋ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಎಲ್ಲಾ ಗ್ರಾ.ಪಂ. ಮತ್ತು ಗ್ರಾಮ ಮಟ್ಟದಲ್ಲಿ ಜನವಸತಿಗಳಿರುವ ಜಾಗಕ್ಕೆ ತೆರಳಿ ಉತ್ತಮ ರೀತಿಯಲ್ಲಿ ಪ್ರಚಾರ ಮಾಡಿ ಜನರಿಗೆ ಸೂಕ್ತ ಮಾಹಿತಿ ನೀಡಲು ತಿಳಿಸಿದರು.