ಮಡಿಕೇರಿ, ಡಿ. ೨೮: ನೂತನ ವರ್ಷಾಚರಣೆ ಸಂದರ್ಭ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ತಿಳಿಸಿದ್ದಾರೆ.

‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ತಾ. ೩೧ ರಂದು ರಾತ್ರಿ ೧೦ ಗಂಟೆ ಬಳಿಕ ಮರುದಿನ ಬೆಳಿಗ್ಗೆ ೬ ಗಂಟೆಯವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಹೋಂಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಧ್ವನಿವರ್ಧಕವನ್ನು ಬಳಸುವಂತಿಲ್ಲ. ಧ್ವನಿವರ್ಧಕ ಬಳಸುವ ಅವಧಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಈ ಸಂಬAಧ ಯಾವುದಾದರೂ ದೂರುಗಳು ಬಂದಲ್ಲಿ ಶಬ್ಧ ಮಾಲಿನ್ಯ ನಿಯಂತ್ರಣ ಕಾಯ್ದೆ ಅಡಿ ಇಲಾಖೆ ಕ್ರಮಕೈಗೊಳ್ಳಲಿದೆ. ಅಕ್ರಮವಾಗಿ ಮದ್ಯ ಮಾರಾಟ, ಗಾಂಜಾ, ಅಫೀಮಿನಂತಹ ಮಾದಕ ವಸ್ತುಗಳ ಬಳಕೆಗೆ ಅವಕಾಶವಿಲ್ಲ. ಬರುವ ಅತಿಥಿಗಳ ಬಗ್ಗೆ ರೆಸಾರ್ಟ್ ಹೋಂಸ್ಟೇ ಲಾಡ್ಜ್ ಮಾಲೀಕರುಗಳು ಸಮಗ್ರ ಮಾಹಿತಿಯನ್ನು ಸಂಗ್ರಹಿಸಿಕೊಳ್ಳವುದರ ಜೊತೆಗೆ ಬಂದ ಅತಿಥಿಗಳಿಗೆ ಪೊಲೀಸ್ ಇಲಾಖೆಯ ನಿಯಮಗಳ ಬಗ್ಗೆ ಮನದಟ್ಟು ಮಾಡಿಕೊಡುವ ಮೂಲಕ ಯಾವುದೇ ತೊಂದರೆಗಳು ಉಂಟಾಗದAತೆ ಗಮನಹರಿಸಬೇಕು.

ಜೊತೆಗೆ ಬಂದ ಅತಿಥಿಗಳಿಗೆ ಪೊಲೀಸ್ ಇಲಾಖೆಯ ನಿಯಮಗಳ ಬಗ್ಗೆ ಮನದಟ್ಟು ಮಾಡಿಕೊಡುವ ಮೂಲಕ ಯಾವುದೇ ತೊಂದರೆಗಳು ಉಂಟಾಗದAತೆ ಗಮನಹರಿಸಬೇಕು.

ಬಿಗಿಗೊಳಿಸಲಾಗುವುದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ಇಡಲಾಗುವುದು ಎಂದು ಅಯ್ಯಪ್ಪ ಅವರು ತಿಳಿಸಿದ್ದಾರೆ.

ಈ ಸಂಬAಧ ಈಗಾಗಲೇ ಜಿಲ್ಲೆಯ ಅಲ್ಲಲ್ಲಿ ಪೊಲೀಸ್ ಇಲಾಖೆಯಿಂದ ರೆಸಾರ್ಟ್, ಹೋಂಸ್ಟೇ, ಲಾಡ್ಜ್ ಮಾಲೀಕರುಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದ್ದು, ಜಿಲ್ಲಾ ಕೇಂದ್ರ ಮಡಿಕೇರಿ ನಗರ ಠಾಣೆಯಲ್ಲಿ ರೆಸಾರ್ಟ್, ಹೋಂಸ್ಟೇ, ಲಾಡ್ಜ್ ಮಾಲೀಕರುಗಳ ಸಭೆ ನಡೆಸಿದ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಅವರು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.