ಕೂಡಿಗೆ, ಡಿ. ೨೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಗ್ರಾಮದ ಉಪ ರಸ್ತೆಯಾದ ಪರಿಶಿಷ್ಟ ಜಾತಿ ಕಾಲೋನಿಗೆ ತೆರಳುವ ರಸ್ತೆಗೆ ಶಾಸಕರ ಅನುದಾನದಲ್ಲಿ ಈಗಾಗಲೇ ರೂ. ೫ ಲಕ್ಷ ಹಣ ಮಂಜೂರಾಗಿ ಭೂಮಿ ಪೂಜೆ ನಡೆದಿದ್ದು, ಆ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇರೆಡೆಗೆ ವರ್ಗಾಯಿಸಲಾಗುತ್ತಿದೆ ಎಂದು ಆರೋಪಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮುಂಭಾಗ ಹಾರಂಗಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕಳೆದ ೬ ತಿಂಗಳಲ್ಲಿ ಹಾರಂಗಿಯ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ಉಪ ರಸ್ತೆಗೆ ಕಾಂಕ್ರಿಟ್ ರಸ್ತೆಯ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಡೆಸಲು ಭೂಮಿ ಪೂಜೆ ನಡೆದರೂ ಈ ಕಾಮಗಾರಿಯನ್ನು ವಿಜಯಪುರ ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ವರ್ಗಾವಣೆ ಮಾಡಿದ್ದಾರೆ ಎಂದು ಹಾರಂಗಿ ಗ್ರಾಮದ ಮಹದೇವ, ಚಂದ್ರಶೇಖರ್ ಆರೋಪಿಸಿದರು.
ಇದಕ್ಕೆ ಸಂಬAಧಿಸಿದAತೆ ಶಾಸಕ ಅಪ್ಪಚ್ಚು ರಂಜನ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಈಗಾಗಲೇ ಹಾರಂಗಿಯ ಪರಿಶಿಷ್ಟ ಜಾತಿ ಕುಟುಂಬದವರ ಮನೆಗಳಿಗೆ ತೆರಳುವ ಕಾಂಕ್ರಿಟ್ ರಸ್ತೆಗೆ ಈಗಾಗಲೇ ಭೂಮಿ ಪೂಜೆ ನೆರವೇರಿಸಲಾಗಿದ್ದು, ಅಲ್ಲಿಯೇ ೫ ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.