ವೀರಾಜಪೇಟೆ, ಡಿ. ೨೮: ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿನ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಂಡಲ ಪೂಜೆ ಅಂಗವಾಗಿ ವಿವಿಧ ಪೂಜಾ ಕೈಂಕರ್ಯ ನಡೆಯಿತು. ದೇವಾಲಯವನ್ನು ತಳಿರು ತೋರಣ, ವಿವಿಧ ಬಗೆಯ ಬಣ್ಣದ ಹೂವು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಬೆಳಿಗ್ಗೆಯಿAದಲೇ ಗಣಪತಿ ಹೋಮ, ಎಳನೀರು ಅಭಿಷೇಕ, ಚಂಡೆಮೇಳ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಕ್ಕಿ ಪೂಜೆ ಮತ್ತು ಮಹಾಪೂಜೆಗಳು ಶ್ರದ್ಧಾಭಕ್ತಿಯಿಂದ ಜರುಗಿತು.

ಇದೇ ಸಂದರ್ಭ ಅಪಾರ ಸಂಖ್ಯೆಯಲ್ಲಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಸುರೇಶ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ಸದಸ್ಯರುಗಳು ಮತ್ತು ಇತರರು ಇದ್ದರು.