ಮಡಿಕೇರಿ, ಡಿ. ೨೮: ತಾ. ೨೯ ರಂದು ರಾಷ್ಟçಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಮತ್ತು ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ನಗರದಲ್ಲಿ ಆಚರಿಸಲು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ನಗರದ ಕುವೆಂಪು ಪುತ್ಥಳಿ ಆವರಣ ಮತ್ತು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

‘ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಮಡಿಕೇರಿ ನಗರದಲ್ಲಿರುವ ಕುವೆಂಪು ಪುತ್ಥಳಿಯನ್ನು ನವೀಕರಿಸಬೇಕಿದೆ. ಆ ನಿಟ್ಟಿನಲ್ಲಿ ಪುತ್ಥಳಿಯನ್ನು ಎತ್ತರಿಸುವುದರ ಜೊತೆಗೆ, ಪ್ರತಿಮೆಯ ಮುಖವನ್ನು ರಸ್ತೆ ಕಡೆಗೆ ಮಾಡುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಈ ಸಂಬAಧ ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯಧನ ಕಲ್ಪಿಸಬೇಕು ಎಂದು ಮನವಿ ಮಾಡಿದರು.’

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ವಿಶ್ವ ಮಾನವ ದಿನಾಚರಣೆಗೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ವಿಶ್ವ ಮಾನವ ಕುವೆಂಪು ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು. ವಿಶ್ವ ಮಾನವ ಸಂದೇಶಗಳು ಎಲ್ಲೆಡೆ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಕುವೆಂಪು ಅವರು ರಚಿಸಿರುವ ಹಾಡುಗಳನ್ನು ಹಾಡಿಸುವಂತಾಗಬೇಕು ಎಂದು ಸಲಹೆಯಿತ್ತರು.

ಇದಕ್ಕೆ ಧ್ವನಿಗೂಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್, ರಾಷ್ಟçಕವಿ ಕುವೆಂಪು ಅವರು ವೈಚಾರಿಕ ಹಾಗೂ ವೈಜ್ಞಾನಿಕ ಚಿಂತನೆಯನ್ನು ಒಳಗೊಂಡಿದ್ದು, ಅವರ ವಿಚಾರಧಾರೆಗಳನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಕೋರಿದರು.

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರ್ಕಾರದ ನಿರ್ದೇಶನದಂತೆ ಜನವರಿ ೧ ರಂದು ಭಾರತೀಯ ವಿದ್ಯಾಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ದೇವದಾಸ್ ಕೋರಿದರು.

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಂದು ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಪ್ರೋತ್ಸಾಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಬಿ.ಬಿ. ನಾಗರಾಜ ಮಾತನಾಡಿ, ವಿಶ್ವಕರ್ಮ ಸಮಾಜದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಜೊತೆಗೆ ನೆನಪಿನ ಕಾಣಿಕೆ ನೀಡುವಂತಾಗಬೇಕು ಎಂದು ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ವಿಶ್ವ ಮಾನವ ದಿನಾಚರಣೆ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಯೋಜನೆ ಸಂಬAಧ ಹಲವು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶನ ಹೆಚ್.ಎನ್. ಸುಬ್ರಮಣ್ಯ, ಸಮಾಜದ ಪ್ರಮುಖರಾದ ರತೀಶ್ ಆಚಾರ್ಯ, ರಘು ಆಚಾರ್ಯ, ಮೋಹನ್, ರವಿ ಇತರರು ಇದ್ದರು.