ಸಿದ್ದಾಪುರ, ಡಿ. ೩೦ : ನೆಲ್ಯಹುದಿಕೇರಿ ಗ್ರಾಮದ ೪ನೇ ವಾರ್ಡಿನ ಶಾಲೆ ರಸ್ತೆಯ ನಿವಾಸಿ ಟಿ.ಟಿ. ಉದಯಕುಮಾರ್ ಎಂಬವರಿಗೆ ಸೇರಿದ ಭತ್ತದ ಕೃಷಿ ಮಾಡಿದ ಗದ್ದೆಗಳಿಗೆ ಕಾಡಾನೆಗಳು ರಾತ್ರಿ ಸಮಯದಲ್ಲಿ ಲಗ್ಗೆಯಿಟ್ಟು ಭತ್ತದ ಬೆಳೆಗಳನ್ನು ತಿಂದು ತುಳಿದು ನಾಶಗೊಳಿಸಿವೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಗದ್ದೆಗಳಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸುತ್ತಿದ್ದು, ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ. ಇದರಿಂದಾಗಿ ಕೈಯಿಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.