ಕುಶಾಲನಗರ, ಡಿ. ೩೦: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟ್ಯಾಂಕ್ ನೆಲಸಮ ಪ್ರಕರಣಕ್ಕೆ ಸಂಬAಧಿಸಿದAತೆ ಸ್ಥಳ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ ಚೆಲುವರಾಜು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ‘ಶಕ್ತಿ’ಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಷ್ಟನೆ ನೀಡಿದ್ದು, ಈ ಪ್ರಕರಣದ ಬಗ್ಗೆ ಸೂಕ್ತ ಮಾಹಿತಿ ಕಲೆ ಹಾಕುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಆಸ್ತಿ ಸಂರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಚೆಲುವರಾಜು ತಿಳಿಸಿದ್ದಾರೆ.