ಕೂಡಿಗೆ, ಡಿ. ೩೦: ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿ ಕೆಡಿಪಿ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಸಭೆಗೆ ಕೆಲವು ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾದ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಬಗ್ಗೆ ಅಧ್ಯಕ್ಷ ಸಿ.ಎಲ್. ವಿಶ್ವ ಖಂಡನೆ ವ್ಯಕ್ತಪಡಿಸಿದರು. ನಂತರ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.
ನೀರಾವರಿ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಅವೈಜ್ಞಾನಿಕವಾಗಿರುವ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಈ ವ್ಯಾಪ್ತಿಯ ನಾಲೆಗಳ ಹೂಳೆತ್ತುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗೆ ಸೂಚಿಸಲಾಯಿತು.
ಪರಿಶಿಷ್ಟ ಜಾತಿ, ಪಂಗಡದವರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರುವುದರಿಂದ ಫಲಾನುಭವಿಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು ಸಮರ್ಪಕವಾಗಿ ಕ್ರಮವಹಿಸುವಂತೆ ಚೆಸ್ಕಾಂ ಅಧಿಕಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವ ಸೂಚಿಸಿದರು. ಅಪಾಯದ ಸ್ಥಿತಿಯಲ್ಲಿರುವ ಶಿಥಿಲಾ ವಸ್ಥೆಯಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಿಸಬೇಕು. ಅಪಾಯದ ಮಟ್ಟದಲ್ಲಿರುವ ವಿದ್ಯುತ್ ತಂತಿಗಳಿAದ ಹಲವು ಮಂದಿ ಪ್ರಾಣ ಕಳೆದು ಕೊಂಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾ.ಪಂ. ಸದಸ್ಯ ಆರ್.ಕೆ. ಚಂದ್ರ ಅವರು ತಕ್ಷಣವಾಗಿ ಸರಿಪಡಿಸು ವಂತೆ ಮತ್ತು ಈ ಸಮಸ್ಯೆಯನ್ನು ಬಗೆಹರಿಸಲು ಕೂಡಲೇ ಕ್ರಮಕೈಗೊಳ್ಳಲು ಒತ್ತಾಯಿಸಿದರು. ತೋಟಗಳಲ್ಲಿ, ಶಾಲಾ ಆವರಣದಲ್ಲಿ ವಿದ್ಯುತ್ ಮಾರ್ಗಗಳನ್ನು ಸುಸ್ಥಿಯಲ್ಲಿಡಲು ಅಧ್ಯಕ್ಷ ವಿಶ್ವ ನಿರ್ದೇಶಿಸಿದರು.
ಗ್ರಾಮದಲ್ಲಿ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪಶುಪಾಲನೆ ಇಲಾಖೆ ವೈದ್ಯರು, ಶುಶ್ರೂಷಕರು ವಾರದ ೫ ದಿನ ಸೇವೆ ಒದಗಿಸಬೇಕು. ಇಲ್ಲದಿದ್ದಲ್ಲಿ ಚಿಕಿತ್ಸಾ ಕೇಂದ್ರದ ಮುಂದೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷ ಸಿ.ಎಲ್. ವಿಶ್ವ ಎಚ್ಚರಿಸಿದರು. ಈ ಬಗ್ಗೆ ಪಶು ಸಂಗೋಪನಾ ಸಚಿವರಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪತ್ರ ಬರೆಯ ಲಾಗುವುದು ಎಂದರು. ಪ್ರವಾಸಿಗರ ವಾಹನ ವೇಗಕ್ಕೆ ಕಡಿವಾಣ ಹಾಕಬೇಕು, ಪ್ರವಾಸಿ ತಾಣ ಗಳಲ್ಲಿ ಮಾದಕ ವ್ಯಸನ ನಿಯಂತ್ರಣ, ಬೀಡಾಡಿ ದನಗಳ ನಿಯಂತ್ರಣಕ್ಕೆ ಸಹಕಾರ ನೀಡಲು ಪೊಲೀಸ್ ಇಲಾಖೆಯನ್ನು ಕೋರಲಾಯಿತು. ಗ್ರಾಮದಲ್ಲಿ ಸ್ಮಶಾನ ಸಮಸ್ಯೆ ಇತ್ಯರ್ಥಪಡಿಸಬೇಕು, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಒದಗಿಸುವಂತೆ ಗ್ರಾಮ ಲೆಕ್ಕಿಗರನ್ನು ಕೋರಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಚೆಸ್ಕಾಂ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೊಲೀಸ್, ಕೃಷಿ, ತೋಟಗಾರಿಕೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪ್ರತಿನಿಧಿಗಳು ಸಭೆಗೆ ಇಲಾಖೆ ಸವಲತ್ತುಗಳ ಮತ್ತು ಸೌಲಭ್ಯಗಳ ಬಗ್ಗೆ ಸಭೆಗೆ ಸಂಪೂರ್ಣವಾದ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸಮೀರಾ, ಸದಸ್ಯರಾದ ಆರ್.ಕೆ. ಚಂದ್ರ, ಕುಸುಮ, ಜಾಜಿ, ಅಭಿವೃದ್ಧಿ ಅಧಿಕಾರಿ ಕಲ್ಪನಾ, ಕಾರ್ಯದರ್ಶಿ ಶೇಷಗಿರಿ ಇದ್ದರು.