ಮಡಿಕೇರಿ, ಜ. ೧: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. ೩೧ ರವರೆಗೆ ಕಾಲಾವಕಾಶ ನೀಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದು. ಸಂಪರ್ಕಿಸ ಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್ ಠಿosಣmಚಿಣಡಿiಛಿheಟಠಿ@ ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.