ಮಡಿಕೇರಿ, ಜ. ೧: ಪ್ರಸಕ್ತ ಸಾಲಿಗೆ ೧ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೨೦ ರವರೆಗೆ ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಯನ್ನು ವೆಬ್ಸೈಟ್ ವಿಳಾಸ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ ಮಿತಿ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿ ವೇತನ ರೂ. ೨.೫೦ ಲಕ್ಷ/ ವಾರ್ಷಿಕ, ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಪ್ರವರ್ಗ-೧ ವಿದ್ಯಾರ್ಥಿಗಳಿಗೆ ೧ ಲಕ್ಷ/ ವಾರ್ಷಿಕ ಪ್ರವರ್ಗ-೨ಎ, ೩ಎ, ೩ಬಿ, ಇತರ ಹಿಂದುಳಿದ ವರ್ಗಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.೪೪,೫೦೦ ಆಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.