ಕುಶಾಲನಗರ, ಜ. ೧: ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಜನ್ಮ ದಿನಾಚರಣೆ ಮತ್ತು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯ ಉದ್ಘಾಟನೆ ಕಾರ್ಯಕ್ರಮ ತಾ. ೩ ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ತಿಳಿಸಿದ್ದಾರೆ.
ಅವರು, ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮವು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ ಮತ್ತು ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದ್ದು, ಸಮಾರಂಭದ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷÀ ಬಾಲಕೃಷ್ಣ ಅವರು ನೆರವೇರಿಸಲಿದ್ದಾರೆ.
ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸಮಾ ರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪ್ಪಳ್ಳಿ ರವೀಂದ್ರ, ಮಾಜಿ ಸಚಿವÀ ಬಿ.ಎ ಜೀವಿಜಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ ಚಂಗಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ ಮತ್ತಿತರರು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ - ಜಿಲ್ಲಾ ಒಕ್ಕಲಿಗರ ಗೌಡ ಯುವ ವೇದಿಕೆಯ ಅಧ್ಯಕ್ಷರಾಗಿ ಎಂ.ಡಿ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಸುಮಂತ್ ಕೂಗೂರು, ಉಪಾಧ್ಯಕ್ಷರಾಗಿ ಲೋಹಿತ್ ಗೌಡ, ವಿ.ವಿ ದಾನೇಶ್, ಖಜಾಂಚಿಯಾಗಿ ಚಂದ್ರಶೇಖರ್ ಹೇರೂರು, ಕಾರ್ಯದರ್ಶಿಗಳಾಗಿ ಕೆ.ಟಿ ಪ್ರವೀಣ್, ಶೋಬಿತ್, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಹೆಚ್. ಕಿರಣ್, ಮೇಘನ್ ಮತ್ತು ೧೫ ಮಂದಿ ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಂ.ಡಿ ಕೃಷ್ಣಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗ ಗೌಡ ಯುವ ವೇದಿಕೆ ತಾಲೂಕು ಅಧ್ಯಕ್ಷ ವಿ.ಬಿ ಜಯರಾಜ್, ಎಂ.ಹೆಚ್. ರಘು ಮತ್ತಿತರ ಪದಾಧಿಕಾರಿಗಳು ಇದ್ದರು.