ಮಡಿಕೇರಿ, ಜ. ೧: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ. ೧೫ ರಂದು ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಸೇನಾ ದಿನವನ್ನು ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕಾಲೇಜು ಆವರಣದಲ್ಲಿರುವ ಫೀ.ಮಾ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ರಾಜ್ಯ ಸಂಘದಿAದ ಕೊಡಮಾಡುವ ಫೀ.ಮಾ. ಕಾರ್ಯಪ್ಪ ಪ್ರಶಸ್ತಿಗೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಪ್ರಗತಿಪರ ರೈತ ಸೋಮೆಯಂಗಡ ಗಣೇಶ್ ತಿಮ್ಮಯ್ಯ, ಚಲನಚಿತ್ರ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್, ಮ್ಯಾರಥಾನ್‌ನಲ್ಲಿ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆಗೈದ ಹೊಸೊಕ್ಲು ಚಿಣ್ಣಪ್ಪ, ತಂಬAಡ ನಾಣಯ್ಯ ಅವರುಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಸನಿಲ್ ಸುಧೀರ್, ಸಂಚಾಲರುಗಳಾದ ಸಿ.ಜಿ. ತಿಮ್ಮಯ್ಯ, ಬೊಜ್ಜಂಗಡ ಸುನಿಲ್, ವಾಸು ಹಾಗೂ ಅಪ್ಪಚ್ಚೀರ ನೀಲಮ್ಮ ಹಾಜರಿದ್ದರು.