ಕೂಡಿಗೆ, ಡಿ. ೩೧: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿಯು ಅಮೃತ ಗ್ರಾಮ ಯೋಜನೆಗೆ ಜಿಲ್ಲೆಯಲ್ಲಿ ಆಯ್ಕೆಯಾಗಿದ್ದು, ಅದಕ್ಕೆ ಸಂಬAಧಿಸಿದ ಕಾಮಗಾರಿಯ ಕ್ರಿಯಾ ಯೋಜನೆ ಸಂಬAಧ ಸರ್ವ ಸದಸ್ಯರುಗಳು ಚರ್ಚಿಸಿದರು. ನಂತರ ಅನುದಾನವನ್ನು ಎಲ್ಲಾ ವಾರ್ಡ್ಗಳಲ್ಲಿ ಕಾಮಗಾರಿ ಯನ್ನು ನಡೆಸುವ ಬಗ್ಗೆ ಚರ್ಚೆ ನಡೆದು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಸದಸ್ಯೆ ಫಿಲೋಮಿನಾ ಸಭೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ೯೪(ಸಿ)ಅಡಿ ಹಕ್ಕುಪತ್ರವನ್ನು ಇಲಾಖೆಯ ಮೂಲಕ ಕೊಡಿಸುವುದಾಗಿ ಹೇಳಿ ಕೆಲ ಸದಸ್ಯರು ಗ್ರಾಮಸ್ಥರಿಂದ ಹಣವನ್ನು ವಸೂಲಿ ಮಾಡಿರುತ್ತಾರೆ ಎಂದು ಸಭೆಯಲ್ಲಿ ತಿಳಿಸಿದರು. ಅದಕ್ಕೆ ಸಭೆಯಲ್ಲಿದ್ದ ಅನೇಕ ಸದಸ್ಯರು ಮನೆಗೆ ಹಕ್ಕು ಪತ್ರವನ್ನು ಕೊಡಿಸುವ ಕೆಲಸವನ್ನು ಈ ರೀತಿಯಲ್ಲಿ ಮಾಡಿರುವುದು ಖಂಡನಿಯ ಎಂದರು. ಗ್ರಾ.ಪಂ. ವ್ಯಾಪ್ತಿಯಲ್ಲಿ ವಸತಿ ಯೋಜನೆಗೆ ಸಂಬAಧಿಸಿದAತೆ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಸಂಬAಧಿಸಿದAತೆ ಚರ್ಚೆಗಳು ನಡೆದವು. ನಂತರ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗೆ ಸಂಬAಧಿಸಿದAತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ವಿಷಯಗಳ ಬಗ್ಗೆ ಮಾಹಿತಿ ಪಡೆದ ಸದಸ್ಯರು ಆಯಾ ವಾರ್ಡ್ಗಳಲ್ಲಿ ಕಾಮಗಾರಿಯನ್ನು ನಡೆಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೇರಿದಂತೆ ಸದಸ್ಯರು ಹಾಜರಿದ್ದರು.