ಗೋಣಿಕೊಪ್ಪಲು, ಡಿ. ೩೧: ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದ ಕಾಡುಕೋಣಕ್ಕೆ ಗುಂಡೇಟು ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಶೋಧ ಕಾರ್ಯ ಚುರುಕುಗೊಳಿಸಿದೆ.
ಗಡಿ ಭಾಗವಾದ ತಿತಿಮತಿ ಸಮೀಪದ ಆನೆಚೌಕೂರು ಬಳಿಯ ಮತ್ತಿಗೋಡು ಸಾಕಾನೆ ಶಿಬಿರದ ಅನತಿ ದೂರದ ನಾಗರಹೊಳೆ ರಾಷ್ಟಿçÃಯ ಉದ್ಯಾನವನದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಒಂದು ವಾರದ ಹಿಂದೆ ೮ ವರ್ಷ ಪ್ರಾಯದ ಕಾಡು ಕೋಣವೊಂದಕ್ಕೆ ಗುಂಡೇಟು ತಗುಲಿ ಮೈಸೂರು - ಕೊಡಗು ಸಂಪರ್ಕ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಕಾಡುಕೋಣವು ಅಸುನೀಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾಡುಕೋಣವನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ಕಾಡುಕೋಣಕ್ಕೆ ಗುಂಡೇಟು ತಗುಲಿ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ವಿಶೇಷ ತಂಡ ರಚಿಸಿ ಆರೋಪಿಗಾಗಿ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಅಲ್ಲದೆ ವಿವಿಧ ಕೋನಗಳಲ್ಲಿ ತನಿಖೆ ಕೈಗೊಂಡಿರುವ ಅಧಿಕಾರಿಗಳು ಈಗಾಗಲೇ ನಾಗರಹೊಳೆ ರಾಷ್ಟಿçÃಯ ಉದ್ಯಾನವನದ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ವ್ಯಾಪ್ತಿಯಲ್ಲಿ ಘಟನೆಗೆ ಸಂಬAಧಿಸಿದAತೆ ಸಾಕ್ಷಾö್ಯಧಾರಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ. -ಹೆಚ್.ಕೆ.ಜಗದೀಶ್