ಸಿದ್ದಾಪುರ, ಡಿ. ೩೧: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಮೀಣ ಕ್ರೀಡಾಕೂಟ ಸಿದ್ದಾಪುರ ಸರ್ಕಾರಿ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ತುಳಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಪುರುಷರು ಸೇರಿದಂತೆ ಸಾರ್ವಜನಿಕರಿಗೆ ಕಬಡ್ಡಿ, ಹಗ್ಗಜಗ್ಗಾಟ, ಓಟ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡರು.

ಕ್ರೀಡೆಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ಸಂದರ್ಭ ಗುಹ್ಯ ಅಗಸ್ತೆö್ಯÃಶ್ವರ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೇವಜಾನು, ಸಮಾಜ ಸೇವಕ ಕೆ.ಯು. ಅಬ್ದುಲ್ ಮಜಿದ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಕೆ. ಬಶೀರ್, ಶಾಲಾ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನಮೋಹನ್ ಸೇರಿದಂತೆ ಪಂಚಾಯಿತಿ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಜರಿದ್ದರು.